
ಜಮ್ಮು ಕಾಶ್ಮೀರದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ.
ಈ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿಸಲಾಗಿದೆ. ಶನಿವಾರ ಜಮ್ಮು ಕಾಶ್ಮೀರದ ಗ್ರಾಮ ಒಂದರಲ್ಲಿ ಇಬ್ಬರು ಭಯೋತ್ಪಾದಕರ ಮಾಹಿತಿ ಆಧರಿಸಿ ಸೇನಾ ಪಡೆ ಕಾರ್ಯಾಚರಣೆ ನಡೆಸಿತ್ತು. ದಾಳಿಯ ಸಮಯದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಯ ಪರಿಣಾಮವಾಗಿ ಇಬ್ಬರು ಯೋಧರು ಹುತಾತ್ಮರಾದರು ಎಂದು ವರದಿಯಾಗಿದೆ.