
ಮಧ್ಯನೀತಿ ಹಗರಣದ ಆರೋಪದಲ್ಲಿ ಬಂದಿದ್ದರಾಗಿದ್ದ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಜಾಮೀನಿಗೆ ತಡೆ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು ಇದೀಗ ಸುಪ್ರೀಂಕೋರ್ಟ್ ವಿಚಾರಣೆಯನ್ನು ಜೂನ್ 26ಕ್ಕೆ ಮುಂದೂಡಿದೆ.
ಮಧ್ಯಂತರ ಜಾಮೀನಿನ ಮೇಲೆ ಒಮ್ಮೆ ಬಿಡುಗಡೆಯಾಗಿದ್ದ ಕೇಜ್ರಿವಾಲ್ ಅವರ ಜಾಮೀನನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತನ್ನ ಆದೇಶ ನೀಡುವವರೆಗೆ ಜಾಮೀನಿಗೆ ತಡೆ ನೀಡಿದೆ.
ಶುಕ್ರವಾರ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಲೋಪ್‌ಸೈಡ್ ಮತ್ತು ಏಕಪಕ್ಷೀಯವಾಗಿದೆ. ದಾಖಲೆಗಳನ್ನು ಪರಿಗಣಿಸದೆಯೇ ನಿರ್ಧಾರ ಕೈಗೊಳ್ಳಲಾಗಿದೆ. ದಾಖಲೆಗಳನ್ನು ಪರಿಗಣಿಸದೆ ಅವು ಸಂಬಂಧಿತ ಅಥವಾ ಅಪ್ರಸ್ತುತ ಎಂದು ಹೇಗೆ ತೀರ್ಮಾನಿಸುತ್ತೀರಿ ಎಂದು ಇಡಿ ಪರ ವಕೀಲ ರಾಜು ವಾದಿಸಿದ್ದರು.
ಪ್ರಕರಣದ ತುರ್ತು ವಿಚಾರಣೆ ನಡೆದು ಜಾಮಿನು ಆದೇಶಕ್ಕೆ ಜಾರಿಗೆ ಎರಡು ದಿನಗಳ ಕಾಲ ಮಧ್ಯಂತರ ತಡೆ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಕೇಜ್ರಿವಾಲ್ ಅವರು ಪ್ರಸ್ತುತ ಮೇಲ್ಮನವಿ ಸಲ್ಲಿಸಿದ್ದಾರೆ. ಕೆಲ ಮದ್ಯ ಮಾರಾಟಗಾರರಿಗೆ ನೆರವಾಗುವ ಉದ್ದೇಶದಿಂದ ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಪಿತೂರಿ ನಡೆಸಿದ್ದರು ಎಂಬ ಕಾರಣ ನೀಡಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು.