ಕಾರ್ಕಳ ಜ್ಞಾನಸುಧಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಅನ್ವಿ.ಹೆಚ್. ಅಂಚನ್ ರಾಜ್ಯಮಟ್ಟಕ್ಕೆ ಆಯ್ಕೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2024 ನೇ ಸಾಲಿನ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದ ಮಹಿಳೆಯರ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅನ್ವಿ ಹೆಚ್. ಅಂಚನ್ ಆರ್ಟಿಸ್ಟಿಕ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳದ ಹರೀಶ್ ಹಾಗೂ ಶ್ರೀಮತಿ ಶೋಭಾ ದಂಪತಿಯ ಸುಪುತ್ರಿಯಾಗಿರುತ್ತಾರೆ.
ಚಕ್ರ ಎಸೆತ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾಕ್ಷಿ ಶೆಟ್ಟಿ ತೃತೀಯ ಸ್ಥಾನ ಪಡೆದಿರುತ್ತಾರೆ. ಇವರು ಬೈಲೂರಿನ ಹರೀಶ್ ಶೆಟ್ಟಿ ಹಾಗೂ ಜಯಲಕ್ಷ್ಮಿ ಶೆಟ್ಟಿ ದಂಪತಿಯ ಸುಪುತ್ರಿಯಾಗಿರುತ್ತಾರೆ.
ವಿಜೇತರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.













