ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆ,ಪೆರ್ವಾಜೆ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢ ಶಾಲೆ ಪೆರ್ವಾಜೆ ಇಲ್ಲಿಯ ವಿದ್ಯಾರ್ಥಿಗಳು ಕ್ರೈಸ್ಟ್ ಕಿಂಗ್ ಸಂಸ್ಥೆ ನಡೆಸಿದ ಜಿಲ್ಲಾ ಮಟ್ಟದ ಪ್ರತಿಭಾನೇಷ್ವಣೆ ಕಾರ್ಯಕ್ರಮದ ಜಾನಪದ ಗೀತೆ ಮತ್ತು ರಂಗೋಲಿಯಲ್ಲಿ ಪ್ರಥಮ ಸ್ಥಾನ ನೃತ್ಯ ಮತ್ತು ವಿಜ್ಞಾನ ಮಾದರಿಯಲ್ಲಿ ದ್ವಿತೀಯ ಸ್ಥಾನ ಪಡೆದು ಸಮಗ್ರ ಪ್ರಶಸ್ತಿ ಪಡೆದು ಹತ್ತು ಸಾವಿರ ನಗದು ಬಹುಮಾನ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡಿದೆ.
ಶಾಲಾ ಅಧ್ಯಾಪಕವೃಂದ,ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.









