ಉಡುಪಿ ಜ್ಞಾನಸುಧಾ ವಿದ್ಯಾರ್ಥಿನಿ ದೃತಿ ಆರ್.ಮೆಂಡನ್ ರಾಜ್ಯಮಟ್ಟಕ್ಕೆ

ಉಡುಪಿ ಜ್ಞಾನಸುಧಾ ವಿದ್ಯಾರ್ಥಿನಿ ಬಾಸ್ಕೆಟ್ ಬಾಲ್ ನಲ್ಲಿ ರಾಜ್ಯಮಟ್ಟಕ್ಕೆ
ದಿನಾಂಕ 20.09.2024ರಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ವತಿಯಿಂದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜು, ಗಣಿತ ನಗರದಲ್ಲಿ ನಡೆದ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧೃತಿ ಆರ್ ಮೆಂಡನ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಕಡಿಯಾಳಿಯ ರಾಜೇಶ್ ಮೆಂಡನ್ ಹಾಗೂ ಮಾಲತಿ ಮೆಂಡನ್ ರವರ ಸುಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.













