ಕಾರ್ಕಳ ಜ್ಞಾನಸುಧಾದ, ವಿಶ್ವ ವಿನಾಯಕ ಮತ್ತು ಅನನ್ಯ.ವಿ.ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ : ಶಾಲಾ ಶಿಕ್ಷಣ ಇಲಾಖೆ ಮತ್ತು
ಉಡುಪಿಯ ಎಂ.ಜಿ.ಎಂ ಕಾಲೇಜಿನ ಇಲ್ಲಿ
ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ
ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ
ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ
ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿಶ್ವ
ವಿನಾಯಕ ಹಾಗೂ ಅನನ್ಯ ವಿ. ಶೆಟ್ಟಿ
ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಇವರ ಸಾಧನೆಗೆ ಜ್ಞಾನಸುಧಾ ಶಿಕ್ಷಣ
ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್
ಶೆಟ್ಟಿಯವರು, ಸಿ.ಇ.ಒ ಮತ್ತು ಪ್ರಾಂಶುಪಾಲ
ದಿನೇಶ್ ಎಂ. ಕೊಡವೂರುರವರು ಅಭಿನಂದಿಸಿ
ಶುಭ ಹಾರೈಸಿದ್ದಾರೆ.













