
ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಎಂ.ಜಿ.ಎಂ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಡಿ.19 ರಂದು ಉಡುಪಿ ಜಿಲ್ಲಾಮಟ್ಟದ ಬ್ಯಾಡ್ಮಿಂಟನ್ ಹುಡುಗಿಯರ ವಿಭಾಗದ ಸ್ಪರ್ಧೆಯಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.
ಇದರಲ್ಲಿ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅವನಿ ಇವರು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಇವರ ಸಾಧನೆಗೆ ಶ್ರೀ ಭುವನೇಂದ್ರ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.













