ಕಾರ್ಕಳ ಎಸ್.ಎನ್.ವಿ ಪದವಿ ಪೂರ್ವ ಕಾಲೇಜಿನ ಅಭಿಲಾಶ್ ರಾಜ್ಯ ಮಟ್ಟಕ್ಕೆ ಆಯ್ಕೆ

ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರಿ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಯೋಜನೆಯಲ್ಲಿ ಸೆ. 30 ರಂದು ಕಾರ್ಕಳ ದಲ್ಲಿ ನಡೆದ ಜಿಲ್ಲಾ ಮಟ್ಟದ ಹುಡುಗರ ವಿಭಾಗದ ಖೋಖೋ ಪಂದ್ಯಾವಳಿಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು ಕಾರ್ಕಳ ತಂಡವನ್ನು ಪ್ರತಿನಿಧಿಸಿದ ಕಾರ್ಕಳ ಎಸ್ ಎನ್ ವಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅಭಿಲಾಶ್ ಯವರು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಪಂದ್ಯಾವಳಿಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ದ್ವಿತೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಅಭಿಲಾಶ್ ಯವರನ್ನು ಎಸ್. ಎನ್. ವಿ. ಪಿಯು ಕಾಲೇಜಿನ ಆಡಳಿತ ಸಮಿತಿ, ಪ್ರಾಂಶುಪಾಲರು, ಅಧ್ಯಾಪಕ ವೃಂದದವರು ಅಭಿನಂದಿಸಿ ಶುಭಹಾರೈಸಿದ್ದಾರೆ.













