
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಗೊಂಡ ಕೋಟ ಶ್ರೀನಿವಾಸ ಪೂಜಾರಿಯವರಿಗೆ ನೈಋತ್ಯ ಪದವೀಧರ ಕ್ಷೇತ್ರದ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡ ಡಾ.ಧನಂಜಯ ಸರ್ಜಿ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡ ಶ್ರೀ ಎಸ್.ಎಲ್.ಭೋಜೇಗೌಡ ರವರಿಗೆ ಭಾರತೀಯ ಜನತಾ ಪಾರ್ಟಿ ಕಾರ್ಕಳ ಇದರ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಜೂನ್ 16 ಭಾನುವಾರದಂದು ಬೆಳಿಗ್ಗೆ 10.00 ಗಂಟೆಗೆ ಶ್ರೀ ಮಂಜುನಾಥ ಪೈ ಸಾಂಸ್ಕೃತಿಕ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯು ದೇಶದ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಅದ್ಭುತ ಗೆಲುವು ಸಾಧಿಸಿದ್ದು, ಈ ಗೆಲುವಿಗೆ ಹಗಲಿರುಳು ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಹಾಗೂ ಮತನೀಡಿ ಸಹಕರಿಸಿದ ಕ್ಷೇತ್ರದ ಜನತೆಗೆ ಪಕ್ಷದ ಕಾರ್ಯಕರ್ತರನ್ನು, ಮತದಾರರನ್ನು ಪಕ್ಷದ ವತಿಯಿಂದ ಅಭಿನಂದಿಸಬೇಕಗಾಗಿದೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಭುದ್ಧ ಮತದಾರರು ಭಾರತೀಯ ಜನತಾ ಪಾರ್ಟಿಯನ್ನು ಬೆಂಬಲಿಸಿದ್ದಾರೆ.
ಆದುದರಿಂದ ಪಕ್ಷದ ಗೆಲುವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರನ್ನು, ಮತದಾರರನ್ನು ಹಾಗೂ ಚುನಾಯಿತಗೊಂಡ ನೂತನ ಸಂಸದರಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಈ ಅಭಿನಂದನಾ ಕಾರ್ಯಕ್ರಮವು ಭಾರತೀಯ ಜನತಾ ಪಾರ್ಟಿ ವತಿಯಿಂದ ಹಮ್ಮಿಕೊಂಡಿದೆ, ಹಾಗೂ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಸಚಿವರು, ಬಿಜೆಪಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಕ್ಷೇತ್ರದ ಶಾಸಕರಾದ ವಿ.ಸುನಿಲ್ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ಕಿಶೋರ್ ಕುಮಾರ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿರುವರು ಎಂದು ಬಿಜೆಪಿ ಕಾರ್ಕಳ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ