
ಬೆಂಗಳೂರು: ಪ್ರಸಕ್ತ ಸಾಲಿನ ಪಿಯುಸಿ ಮೂರನೇ ಪರೀಕ್ಷೆಯು ನಾಳೆಯಿಂದ ಆರಂಭಗೊಳ್ಳಲಿದ್ದು ಒಟ್ಟು 248 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಜೂನ್ 24 ರಿಂದ ಜುಲೈ 7ರವರೆಗೆ ಪರೀಕ್ಷೆಗಳು ನಡೆಯಲಿದ್ದು ಪರೀಕ್ಷಾ ಕೇಂದ್ರದ ಸುತ್ತ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಟ್ಟು 75,995 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಒಂದು ಮತ್ತು ಪರೀಕ್ಷೆ ಎರಡರಲ್ಲಿ ಅನುತ್ತೀರ್ಣ ಮತ್ತು ಫಲಿತಾಂಶ ಸುಧಾರಣೆ ಬಯಸುವ ವಿದ್ಯಾರ್ಥಿಗಳು ಮೂರನೇ ಪರೀಕ್ಷೆ ಬರೆಯಲಿದ್ದಾರೆ.