
ಫೆಬ್ರವರಿ 14 ಬ್ಲ್ಯಾಕ್ ಡೇ ಆಗಿ ಆಚರಣೆ ಮಾಡುತ್ತೇವೆ. ಹಾಗಾಗಿ ಜೇಸಿಐ ಕಾರ್ಕಳ ವತಿಯಿಂದ ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ (Tribute to brave soldiers) ವೀರ ಸೈನಿಕರಿಗೆ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು .
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಚಿತ್ತರಂಜನ್ ಶೆಟ್ಟಿಯವರು, ಪುಲ್ವಾಮಾ ದಾಳಿಯು ಕಾಶ್ಮೀರದಲ್ಲಿ ಭಾರತದ ಭದ್ರತಾ ಸಿಬ್ಬಂದಿಯ ಮೇಲೆ ನಡೆದ ಅತ್ಯಂತ ಮಾರಕ ದಾಳಿಗಳಲ್ಲಿ ಒಂದಾಗಿದೆ. 2019 ರ ಪುಲ್ವಾಮಾ ದಾಳಿಯಲ್ಲಿ ಸ್ಫೋಟಕಗಳಿಂದ ತುಂಬಿದ ವಾಹನವು ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲೆ ಡಿಕ್ಕಿ ಹೊಡೆದಾಗ 40 ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಸಾವನ್ನಪ್ಪಿದರು. ಅಂದಿನಿಂದ, ಫೆಬ್ರವರಿ 14 ಅನ್ನು ಭಾರತದಲ್ಲಿ ಕರಾಳ ದಿನವೆಂದು ಆಚರಿಸಲಾಗುತ್ತಿದೆ. ಎಂದು ದಿನದ ಮಹತ್ವದ ಬಗ್ಗೆ ಶಾಲಾ ಮಕ್ಕಳಿಗೆ ಮಾಹಿತಿಯನ್ನು ನೀಡಿದರು.
ದೀಪದಿಂದ ದೀಪವನ್ನು ಬೆಳಗಿಸುವುದರ ಮೂಲಕ ಅವರನ್ನು ಸ್ಮರಿಸಿ ಮೌನ ಪ್ರಾರ್ಥನೆಯನ್ನು ಮಾಡಿ, ವೀರ ಸೈನಿಕರಿಗೆ ನುಡಿ ನಮನವನ್ನು ಸಲ್ಲಿಸಲಾಯಿತು
ಈ ಸಂದರ್ಭದಲ್ಲಿ ಜೆಸಿಐ ಕಾರ್ಕಳದ ಅಧ್ಯಕ್ಷರಾದ ಜೆಸಿ ಶ್ವೇತಾ ಎಸ್ ಜೈನ್ ಹಾಗೂ ಪೂರ್ವ ಅಧ್ಯಕ್ಷರಾದ ದಿವ್ಯಸ್ಮಿತ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳು ಹಾಗೂ ಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು. ಜೆ ಸಿ ಐ ಕಾರ್ಕಳದ ಅಧ್ಯಕ್ಷರು ಕಾರ್ಯಕ್ರಮವನ್ನು ನಿರ್ವಹಿಸಿದರು



















