
ಸೂರ್ಯ ಫೌಂಡೇಶನ್ (ರಿ) ಸ್ಪಾರ್ಕ್ ಅಕಾಡೆಮಿ, ಲಕ್ಷ್ಯ ಕೆರಿಯರ್ ಅಕಾಡೆಮಿ (ರಿ) ಬೆಂಗಳೂರು ಇವರು ಪ್ರತಿ ವರ್ಷ ರಾಜ್ಯ ಶೈಕ್ಷಣಿಕ ಸಮ್ಮೇಳನ ಬೆಂಗಳೂರಿನಲ್ಲಿ ನಡೆಸುತ್ತಿದ್ದು, ರಾಜ್ಯದ ಅತ್ಯುತ್ತಮ ಶಾಲೆಗಳಿಗೆ ಶಿಕ್ಷಣ ಚೈತನ್ಯ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದಾರೆ. ಈ ವರ್ಷ ಶೈಕ್ಷಣಿಕ, ಸಾಂಸ್ಕೃತಿಕ, ಆಟೊಟ, ಸಂಸ್ಕೃತಿ ಮೊದಲಾದ ವಿಷಯಗಳಲ್ಲಿ ಅತ್ಯುತ್ತಮ ಸಾಧನೆಗೈಯುತ್ತಿರುವ ಜೆಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ಇವರಿಗೆ ನೀಡಲಾಗುತ್ತಿದೆ ಎಂಬುದಾಗಿ ಸೂರ್ಯ ಫೌಂಡೇಶನ್ ನ ಸ್ಥಾಪಕ ಅಧ್ಯಕ್ಷರು ಆದಂತಹ ಸೋಮೇಶ್ ನವೋದಯ ತಿಳಿಸಿದ್ದಾರೆ. ಜನವರಿ 25ರಂದು ಬೆಂಗಳೂರಿನ ಲಕ್ಷ್ಯ ಕೆರಿಯರ್ ಅಕಾಡೆಮಿಯಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸಲಾಗುವುದು .
ಜೇಸಿ ಆಂಗ್ಲ ಮಾಧ್ಯಮ ಶಾಲೆ ಕಾರ್ಕಳದ ಮೊದಲ ಆಂಗ್ಲ ಮಾಧ್ಯಮ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಏಕೈಕ ವಿದ್ಯಾ ಸಂಸ್ಥೆ ಕೂಡ ಹೌದು. ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಯಾಗಿರುವ ಹಿನ್ನೆಲೆ ಎಲ್ಲಾ ಶಿಕ್ಷಕರನ್ನು ಮತ್ತು ವಿದ್ಯಾರ್ಥಿಗಳನ್ನು ಶಾಲಾ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.








