29.4 C
Udupi
Thursday, July 16, 2026
spot_img
spot_img
HomeBlog'ಜೈಲು ನನಗೆ ಹೊಸದಲ್ಲ, ಅಲ್ಲಿಗೆ ಹೋಗಿ ಬಂದೆ ಇಂದು ಮುಖ್ಯಮಂತ್ರಿ ಯಾಗಿ ಕುಳಿತಿದ್ದೇನೆ'; ಕುಮಾರಸ್ವಾಮಿ ವಿರುದ್ಧ...

‘ಜೈಲು ನನಗೆ ಹೊಸದಲ್ಲ, ಅಲ್ಲಿಗೆ ಹೋಗಿ ಬಂದೆ ಇಂದು ಮುಖ್ಯಮಂತ್ರಿ ಯಾಗಿ ಕುಳಿತಿದ್ದೇನೆ’; ಕುಮಾರಸ್ವಾಮಿ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ತಮ್ಮನ್ನು ಜೈಲಿಗೆ ಕಳುಹಿಸಲು ಸಂಚು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದು, ಈ ಸಂಬಂಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮುಖ್ಯಮಂತ್ರಿಯಾದ ನಂತರ ಕೆಲವರಿಗೆ ನಿದ್ದೆಯೇ ಇಲ್ಲದಂತಾಗಿದೆ. ತಮ್ಮ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ ರಾಜಕೀಯವಾಗಿ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಜೈಲು ನನಗೆ ಹೊಸದೇನಲ್ಲ. ಈ ಹಿಂದೆಯೂ ಜೈಲಿಗೆ ಹೋಗಿ ಬಂದಿದ್ದೇನೆ. ಜನರ ಆಶೀರ್ವಾದದಿಂದಲೇ ಇಂದು ಮುಖ್ಯಮಂತ್ರಿಯಾಗಿದ್ದೇನೆ ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿ ವಿರುದ್ಧ ಮಾತಿನ ಚಾಟಿ ಬೀಸಿದ ಶಿವಕುಮಾರ್, ತಮ್ಮ ವಿರುದ್ಧ ಹಿಂದೆಯೂ ಷಡ್ಯಂತ್ರ ನಡೆದಿತ್ತು ಮತ್ತು ಈಗ ಮತ್ತೆ ಅದೇ ಪ್ರಯತ್ನ ಮುಂದುವರಿದಿದೆ. ಹಿರಿಯ ನಾಯಕರಾಗಿ ಅವರಿಗೆ ಗೌರವ ನೀಡುತ್ತೇನೆ. ಆದರೆ ನನ್ನನ್ನು ಜೈಲಿಗೆ ಕಳುಹಿಸುವ ಸಂಕಲ್ಪ ಮಾಡಿಕೊಂಡಿದ್ದರೆ ಅದನ್ನು ಮುಂದುವರಿಸಲಿ. ಯಾರಿಗೂ ಕೆಟ್ಟದ್ದು ಬಯಸುವುದಿಲ್ಲ. ರಾಜ್ಯದ ಜನರು ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವುದೇ ನನ್ನ ಗುರಿ. ಜನಪರ ಆಡಳಿತ ನೀಡುವುದು ಮತ್ತು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದೇ ನನ್ನ ಕರ್ತವ್ಯ ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿ ಕುಮಾರಸ್ವಾಮಿ ಹಾಗೂ ದೇವೇಗೌಡರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ ಸಿಎಂ, ಡಿಎಲ್‌ಎಫ್ ಸಂಸ್ಥೆ, ಭೂ ಹಂಚಿಕೆ ಮತ್ತು ಹಿಂದಿನ ಸರ್ಕಾರದ ನಿರ್ಧಾರಗಳನ್ನು ಪ್ರಸ್ತಾಪಿಸಿದರು. ರಿಯಲ್ ಎಸ್ಟೇಟ್ ದಂಧೆ ನಡೆಸಿದ್ದು ಯಾರು ಎಂಬುದನ್ನು ಜನರೇ ನಿರ್ಧರಿಸಲಿ. ರೈತರ ಜಮೀನುಗಳನ್ನು ಸ್ವಾಧೀನಪಡಿಸಿಕೊಂಡು ಕುಟುಂಬದ ಜಮೀನುಗಳನ್ನು ಉಳಿಸಿಕೊಂಡ ಆರೋಪಗಳಿಗೆ ಉತ್ತರ ನೀಡಬೇಕು. ಬಿಡದಿ, ದೇವಗೆರೆ ಸೇರಿದಂತೆ ಹಲವು ಪ್ರದೇಶಗಳ ಭೂ ವ್ಯವಹಾರಗಳಲ್ಲಿ ಅಕ್ರಮ ನಡೆದಿದೆ ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ತಮ್ಮ ಕನಸಿನ ಯೋಜನೆಯಲ್ಲ, ಇದು ಹಿಂದಿನ ಸರ್ಕಾರ ರೂಪಿಸಿದ್ದ ಯೋಜನೆಯಾಗಿದ್ದು, ಅದನ್ನೇ ಸರ್ಕಾರದ ಯೋಜನೆಯಾಗಿ ಮುಂದುವರಿಸಲಾಗುತ್ತಿದೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು. ಯಾವುದೇ ಖಾಸಗಿ ಸಂಸ್ಥೆಗೆ ಈ ಯೋಜನೆಯನ್ನು ನೀಡುವುದಿಲ್ಲ ಎಂದು ಭರವಸೆ ನೀಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ 900 ಎಕರೆ ಜಮೀನು ಸ್ವಾಧೀನಪಡಿಸಿಕೊಂಡಾಗ ವಿರೋಧಿಸದವರು ಈಗ ಹೋರಾಟ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ಟೀಕಿಸಿದರು. ಆಗ ಅಧಿಕಾರದಲ್ಲಿದ್ದವರು ಹಾಗೂ ಸಂಬಂಧಪಟ್ಟ ಸಚಿವರು ಮೌನವಾಗಿದ್ದೇಕೆ ಎಂಬ ಪ್ರಶ್ನೆಯನ್ನೂ ಅವರು ಎತ್ತಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page