
ಕಾರ್ಕಳ : ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ , ಕೋಟತಟ್ಟು ಗ್ರಾಮ ಪಂಚಾಯತಿ, ಮಣೂರು ಗೀತಾನಂದ ಫೌಂಡೇಶನ್, ಉಸಿರು ಸಂಸ್ಥೆ ,ಬಾಳ್ಕುದ್ರು ಕೈಂಡ್ ಹಾರ್ಟ್ಸ್ , ಬಾರ್ಕೂರು ಮೂಡುಕೇರಿ ವೇಣುಗೋಪಾಲ ಎಜುಕೇಶನಲ್ ಸೊಸೈಟಿ , ಕೋಟತಟ್ಟು ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ನೀಡುವ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಕಾರ್ಕಳ ಜ್ಞಾನಸುಧಾ ಶಾಲೆ ಮತ್ತು ಪ್ರೌಢಶಾಲೆ ಗಣಿತ ನಗರದ, ಹತ್ತನೇ ತರಗತಿಯ ವಿದ್ಯಾರ್ಥಿನಿ ಅನ್ವಿ ಹೆಚ್. ಅಂಚನ್ ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳದ ಹರೀಶ್ ಹಾಗೂ ಶೋಭಾ ಇವರ ಪುತ್ರಿ.
ಸಾಧಕ ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.





