
ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು ಇದಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ನಕಾರ ಸೂಚಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬೇಲಾ ತ್ರಿವೇದಿ ಪೀಠ, ಪ್ರಕರಣವನ್ನು ರದ್ದುಪಡಿಸಲು ನಿರಾಕರಿಸಿದ್ದು ಮಾತ್ರವಲ್ಲದೆ ಮೂರು ತಿಂಗಳೊಳಗೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿದೆ.
ಪ್ರಕರಣದ ಹಿನ್ನೆಲೆ:
ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ, 2013 ರ ಏಪ್ರಿಲ್ 1 ರಿಂದ 2018 ರ ಏಪ್ರಿಲ್ 30 ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.
2017 ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ವಿರುದ್ಧ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು. ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25 ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್ಐಆರ್ ದಾಖಲಿಸಿತ್ತು.
ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ರದ್ದತಿಗೆ ನಕಾರ ಸೂಚಿಸಿದ ಸುಪ್ರೀಂ ಕೋರ್ಟ್
ಉಡುಪಿ: ವರುಣನ ಆರ್ಭಟದಿಂದ ಇತ್ತೀಚೆಗಷ್ಟೇ ಗೋವಾದ ಕೊಂಕಣ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದು ಜುಲೈ 10ರಂದು ಹಲವು ರೈಲುಗಳ ಸಂಚಾರ ವ್ಯತ್ಯಯವಾಗಿದ್ದು ಇದೀಗ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆ ಸೇರಿದಂತೆ ಕೊಂಕಣದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ 14 ಗಂಟೆಗಳ ಕಾಲ ಹಲವು ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ.
ಮಂಗಳೂರು ಎಕ್ಸ್‌ಪ್ರೆಸ್, ಕೊಂಕಣ ಕನ್ಯಾ ಎಕ್ಸ್‌ಪ್ರೆಸ್, ತುಟಾರಿ ಎಕ್ಸ್‌ಪ್ರೆಸ್, ಜನಶತಾಬ್ದಿ ಎಕ್ಸ್‌ಪ್ರೆಸ್, ದಿವಾ ಸಾವಂತವಾಡಿ ಎಕ್ಸ್‌ಪ್ರೆಸ್, ಸಾವಂತವಾಡಿ ಮಡಗಾಂವ್ ಪ್ಯಾಸೆಂಜರ್ ರೈಲು ಸೇವೆ ನಿಂತಿದೆ. ಇನ್ನು ಕರಾವಳಿ ಭಾಗದ 12134 ಸೂಪರ್ ಎಕ್ಸ್‌ಪ್ರೆಸ್ ಛತ್ರಪತಿ ಶಿವಾಜಿ ಮುಂಬೈ ಟರ್ಮಿನಲ್ ರೈಲು ಕ್ಯಾನ್ಸಲ್ ಆಗಿದೆ. 12620 ಮತ್ಸ್ಯ ಗಂಧ ಮಂಗಳೂರು ಟು ಮುಂಬೈ ರೈಲು ಕ್ಯಾನ್ಸಲ್ ಆಗಿದ್ದು ಇದರಿಂದ ಕರ್ನಾಟಕದ ರೈಲು ಪ್ರಯಾಣಿಕರಿಗೆ ಸಮಸ್ಯೆ ಎದುರಾಗಿದೆ.





