
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಬಿಜೆಪಿ AI ವಿಡಿಯೋ ಬಿಡುಗಡೆ ಮಾಡಿ ಟೀಕಿಸಿದೆ.
ಎಕ್ಸ್ ಖಾತೆಯಲ್ಲಿ “ಮುಖ ಬದಲಾಗಿದೆ, ಲೂಟಿ ಮುಂದುವರಿಯಲಿದೆ” ಎಂಬ ಶೀರ್ಷಿಕೆಯಡಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರನ್ನು ಒಳಗೊಂಡ AI ವಿಡಿಯೋ ಹಂಚಿಕೊಂಡು ಲೇವಡಿ ಮಾಡಿದೆ.
ದಲಿತರ ಮತ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್, ಅವರ ಅಭಿವೃದ್ಧಿ ಹಾಗೂ ಮೂಲಸೌಕರ್ಯಗಳ ಕಡೆ ನಿರ್ಲಕ್ಷ್ಯ ತೋರಿದೆ ಎಂದು ಬಿಜೆಪಿ ಆರೋಪಿಸಿದೆ. ದಲಿತ ಸಮುದಾಯದ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದೆ.
ಇದೇ ವೇಳೆ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡದಿರುವ ಮೂಲಕ ಕಾಂಗ್ರೆಸ್ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
































