
ನೇರ ನಡೆ-ನುಡಿಯ, ಸರಳ ಸಜ್ಜನಿಕೆಯ ವ್ಯಕ್ತಿ, ಅಜಾತಶತ್ರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ರಾಜ್ಯ ಉಪಾಧ್ಯಕ್ಷರು, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರು, ವಿವಿಧ ಸಂಘ ಸಂಸ್ಥೆಗಳಲ್ಲಿ ಅಹರ್ನಿಶಿ ದುಡಿದ ಶ್ರಮಜೀವಿ. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನ ಸುದೀರ್ಘ ಸೇವೆಯನ್ನು ಮುಡಿಪಾಗಿಟ್ಟ ಡಿ. ಆರ್ ರಾಜು ಅವರ ಅಗಲುವಿಕೆಯಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.ಈ ದುಃಖದ ಸಮಯದಲ್ಲಿ ಅವರ ಅಗಲುವಿಕೆ ಸಹಿಸುವ ಶಕ್ತಿಯನ್ನು ಭಗವಂತ ದು:ಖತ್ರಪ್ತ ಕುಟುಂಬಕ್ಕೆ ಕರುಣಿಸಲಿ ಎಂದು ಶ್ರೀ ಕೃಷ್ಣ ಕ್ಷೇತ್ರ ಆನೆಕೆರೆ ಆಡಳಿತ ಮೊಕ್ತೆಸರರು ಭಾಸ್ಕರ್ ಎಸ್ ಕೋಟ್ಯಾನ್ ಸಂತಾಪ ಸೂಚಿಸಿದ್ದಾರೆ



















