
ಭವಿಷ್ಯವಾಣಿಗಳಿಗೆ ಹೆಸರುವಾಸಿಯಾಗಿರುವ ಬಲ್ಗೇರಿಯಾದ ಬಾಂಬಾ ವಂಗಾ ಅವರು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಅವರನ್ನು ಮಣಿಸಿ, ಭಾರೀ ಜಯಭೇರಿ ಬಾರಿಸುವ ಮೂಲಕ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಅವರ ಬಗ್ಗೆ ಶಾಕಿಂಗ್ ಭವಿಷ್ಯವಾಣಿ ನುಡಿದಿದ್ದು ಇದೀಗ ಭಾರಿ ವೈರಲ್ ಆಗುತ್ತಿದೆ.
ಜುಲೈ 13, 2024 ರಂದು ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಯುವಕನೊಬ್ಬ ಟ್ರಂಪ್ ಮೇಲೆ ಗುಂಡು ಹಾರಿಸಿದ್ದ ಪರಿಣಾಮ ಟ್ರಂಪ್ ಕಿವಿಗೆ ಗಾಯಗಳಾಗಿತ್ತು. ಈ ದಾಳಿಯ ಬಗ್ಗೆಯೂ ಬಾಬಾ ವಂಗಾ ಮೊದಲೇ ಊಹಿಸಿದ್ದರು. ಇದಲ್ಲದೆ ಟ್ರಂಪ್ ನಿಗೂಢ ಕಾಯಿಲೆಗೆ ತುತ್ತಾಗುತ್ತಾರೆ. ಇದರಿಂದ ಅವರು ಕಿವುಡರಾಗುತ್ತಾರೆ ಮತ್ತು ಅವರು ಬ್ರೈನ್ ಟ್ಯೂಮರ್‌ಗೂ ತುತ್ತಾಗುವ ಸಾಧ್ಯತೆ ಇದೆ ಎಂದು ಡೊನಾಲ್ಡ್ ಟ್ರಂಪ್ ಆರೋಗ್ಯದ ಬಗ್ಗೆ ಬಾಬಾ ವಂಗಾ ಶಾಕಿಂಗ್ ಭವಿಷ್ಯವಾಣಿಯನ್ನು ನುಡಿದಿದ್ದಾರೆ.






















































