
ಉಡುಪಿ: ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ನಿವಾಸಿ 32 ವರ್ಷದ ಗುರುರಾಜ್ ಎಂಬವರು ಅಣ್ಣನ ಸ್ನೇಹಿತನೊಂದಿಗೆ ತನ್ನ ತಂದೆಯನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದು ಆದರೆ ಮಗ ಆಸ್ಪತ್ರೆ ಹೊರಗೆ ಮಲಗಿದ್ದಲ್ಲಿಯೇ ಪ್ರಾಣ ಬಿಟ್ಟ ಘಟನೆ ನಡೆದಿದೆ.
ತಂದೆ ಆಸ್ಪತ್ರೆಯ ಒಳಗೆ ಚಿಕಿತ್ಸೆ ಪಡೆಯುತ್ತಿದ್ದರೆ ಮಗ ರಾತ್ರಿ ಕಾರಿನಲ್ಲಿ ಮಲಗಿ ಬೆಳಗಾಗುವಷ್ಟರಲ್ಲೇ ಸಾವನ್ನಪ್ಪಿದ್ದಾರೆ.
ಗುರುರಾಜ್ ತನ್ನ ತಂದೆಯನ್ನು ದಾಖಲಿಸಿ ಆಸ್ಪತ್ರೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲದ ಹಿನ್ನೆಲೆ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ತನ್ನದೇ ಕಾರಿನಲ್ಲಿ ಗ್ಲಾಸ್ ಮುಚ್ಚಿ ಎಸಿ ಹಾಕಿ ಮಲಗಿದ್ದರು. ಬೆಳಗಾಗುವಷ್ಟರಲ್ಲೇ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಉಸಿರುಗಟ್ಟಿ ಸಾವನ್ನಪ್ಪಲು ನಿಖರ ಕಾರಣ ಮರಣೋತ್ತರ ವರದಿ ಬಳಿಕವಷ್ಟೇ ತಿಳಿಯಲಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


































