
ವಾಷಿಂಗ್ಟನ್: ಖ್ಯಾತ ತಬಲ ವಾದಕ ಜಾಕಿರ್ ಹುಸೈನ್ (73) ಇನ್ನಿಲ್ಲ.
ಇವರು ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದು, ಕಳೆದ ವಾರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾ ಅವರ ಹಿರಿಯ ಪುತ್ರರಾಗಿದ್ದ ಜಾಕಿರ್ ಹುಸೈನ್, ತಮ್ಮ ತಂದೆಯ ಹಾದಿಯಲ್ಲಿಯೇ ವಿಶ್ವ ಪ್ರಸಿದ್ಧಿಗೊಳಿಸಿದ್ದರು. ಭಾರತದ ಶಾಸ್ತ್ರೀಯ ಸಂಗೀತ ಹಾಗೂ ವಿಶ್ವ ಸಂಗೀತಕ್ಕೆ ಜಾಕಿರ್ ಹುಸೈನ್ ಕೊಡುಗೆ ಅಪಾರ. ಇವರು ಪದ್ಮಶ್ರೀ, ಪದ್ಮಭೂಷಣ ಹಾಗೂ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.