
ಸಾರ್ವಜನಿಕ ಶಿಕ್ಷಣ ಇಲಾಖೆ ಕಾರ್ಕಳ ಇವರ ವತಿಯಿಂದ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿಯಾದ ಪ್ರಜನ್ ಶೆಟ್ಟಿ 14ರ ವಯೋಮಿತಿಯ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಾರ್ಕಳದ ಪದ್ಮನಾಭ ಶೆಟ್ಟಿ ಮತ್ತು ಶ್ವೇತ ಶೆಟ್ಟಿ ದಂಪತಿಯ ಸುಪುತ್ರನಾಗಿರುತ್ತಾರೆ.
17ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ 9ನೇ ತರಗತಿಯ ಆರುಷಿ, ಸೋನಲ್ ಲೋಬೋ ಹಾಗೂ 8ನೇ ತರಗತಿಯ ಧ್ರುವಿತಾ ಜಿ.ಡಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿಜೇತ ವಿಧ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿನಂಧಿಸಿದರು.













