
ಬೆಂಗಳೂರು: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಮಕ್ಕಳಿಗೆ ಶಾಲಾ ಬ್ಯಾಗ್ ಹೊರೆ ತಗ್ಗಿಸಲು ರಾಜ್ಯದ ಎಲ್ಲ ಶಾಲೆಗಳಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಪ್ರತಿ ತಿಂಗಳು ಒಂದು ಶನಿವಾರ ‘ಬ್ಯಾಗ್ ರಹಿತ ದಿನ’ ಆಚರಿಸಲು ಸೂಚನೆ ನೀಡಿದೆ.
ಬ್ಯಾಗ್ ರಹಿತ ದಿನವನ್ನು ‘ಸಂಭ್ರಮ ಶನಿವಾರ’ ಎಂದು ಅನುಷ್ಠಾನಗೊಳಿಸಿ ಈ ದಿನದ ವಿದ್ಯಾರ್ಥಿ ಚಟುವಟಿಕೆ ಹಾಗೂ ಶಿಕ್ಷಕರ ಕೈಪಿಡಿಯನ್ನು ಡಿಎಸ್‌ಇಆರ್‌ಟಿ ವೆಬ್‌ಸೈಟ್‌ನಲ್ಲಿ dsert.karnataka.gov.in ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ, ಮಾಧ್ಯಮ ಮತ್ತು ಅಂತರ್ಜಾಲದ ಬಳಕೆ, ಪೌಷ್ಟಿಕತೆ, ಸ್ವಾಸ್ತ್ಯ ಮತ್ತು ಶುಚಿತ್ವ, ಸಾರ್ವಜನಿಕ ನೈರ್ಮಲ್ಯ-ಘನತ್ಯಾಜ್ಯದ ನಿರ್ವಹಣೆ ಆರೋಗ್ಯ ಜೀವನ ಶೈಲಿ, ಸಾರ್ವಜನಿಕ ಸೌಕರ್ಯಗಳು ಮತ್ತು ನನ್ನ ಜವಾಬ್ದಾರಿ, ರಸ್ತೆ ಸುರಕ್ಷತೆ, ಹಿಂಸೆ, ಅಪರಾಧ, ಅಪಘಾತಗಳ ಸಂದರ್ಭಗಳಲ್ಲಿ ರಕ್ಷಣೆ ಹಾಗೂ ಭದ್ರತೆ, ಲಿಂಗ ಸಮಾನತೆಗೆ ಪ್ರೋತ್ಸಾಹ ನೀಡುವುದು ಪ್ರಮುಖ ಚಟುವಟಿಕೆಗಳಾಗಿದ್ದು ಈ ಕುರಿತು ತಿಂಗಳ ಮೂರನೇ ಶನಿವಾರ ಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕೆಂದು ನಿರ್ದೇಶನ ನೀಡಿದೆ.