
ಬೆಂಗಳೂರು: ಕಳೆದ ವರ್ಷ ನಷ್ಟದ ನೆಪದಲ್ಲಿ ತಿರುಮಲ ತಿರುಪತಿಗೆ ನಂದಿನಿ ತುಪ್ಪ ಸರಬರಾಜನ್ನು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಸ್ಥಗಿತಗೊಳಿಸಿದ್ದು ಇದೀಗ ಲಡ್ಡು ಪ್ರಸಾದದಲ್ಲಿ ಇಲ್ಲದ ನಂದಿನಿ ತುಪ್ಪದ ಸ್ವಾದ ಸವಿಯಲು ಮತ್ತೆ ಅವಕಾಶ ಒದಗಿ ಬಂದಿದೆ.
ಕಳೆದ ವರ್ಷ ಕಡಿಮೆ ಮೊತ್ತಕ್ಕೆ ತುಪ್ಪ ಮಾರಾಟ ಮಾಡಲು ಒಪ್ಪದೆ ಸರಬರಾಜು ಟೆಂಡರ್‌ನಿಂದಲೂ ಕೆಎಂಎಫ್ ಹಿಂದೆ ಸರಿದಿತ್ತು.
ಇದೀಗ ಮತ್ತೆ ತಿರುಮಲ ತಿರುಪತಿಗೆ ಕೆಎಂಎಫ್ ನಂದಿನಿ ತುಪ್ಪ ಸರಬರಾಜು ಮಾಡಬೇಕೆಂದು ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಟೆಂಡರ್ ಮೂಲಕ ಬೇಡಿಕೆ ನೀಡಿದ್ದು ಈ ಹಿನ್ನೆಲೆಯಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗೃಹಕಚೇರಿ ಕೃಷ್ಣಾದಲ್ಲಿ ಮೊದಲ ಹಂತದ ತುಪ್ಪ ಸರಬರಾಜು ಟ್ಯಾಂಕರ್‌ಗೆ ಚಾಲನೆ ನೀಡಿದರು. ಪ್ರಾರಂಭಿಕವಾಗಿ 350 ಮೆಟ್ರಿಕ್ ಟನ್ ನಂದಿನಿ ತುಪ್ಪ ಸರಬರಾಜು ಆಗಲಿದೆ.













