28.3 C
Udupi
Wednesday, July 9, 2025
spot_img
spot_img
HomeBlogತಿರುಮಲ ದೇವಸ್ಥಾನದಲ್ಲಿ ಹಿಂದೂಗಳನ್ನು ಮಾತ್ರ ನೇಮಿಸಬೇಕು: ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದಿಢೀರ್ ಆದೇಶ

ತಿರುಮಲ ದೇವಸ್ಥಾನದಲ್ಲಿ ಹಿಂದೂಗಳನ್ನು ಮಾತ್ರ ನೇಮಿಸಬೇಕು: ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದಿಢೀರ್ ಆದೇಶ

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಅವರು ಮೊಮ್ಮಗ ದೇವಾಂಶ್ ಹುಟ್ಟುಹಬ್ಬದ ಪ್ರಯುಕ್ತ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿ ತಿರುಮಲ ದೇವಸ್ಥಾನದಲ್ಲಿ ಹಿಂದೂಗಳನ್ನು ಮಾತ್ರ ನೇಮಿಸಬೇಕು. ಸದ್ಯಕ್ಕೆ ಬೇರೆ ಧರ್ಮದವರು ಅಲ್ಲಿ ಕೆಲಸ ಮಾಡುತ್ತಿದ್ದರೆ, ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಬೇರೆ ಕಡೆಗೆ ವರ್ಗಾಯಿಸಲಾಗುವುದು ಎಂದು ಹೇಳಿದ್ದಾರೆ.

ದೇಶದ ಎಲ್ಲಾ ರಾಜ್ಯ ರಾಜಧಾನಿಗಳಲ್ಲಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಗಳನ್ನು ಕಟ್ಟಲಾಗುವುದು. ತಿರುಪತಿ ತಿಮ್ಮಪ್ಪನ ದೇವಸ್ಥಾನವಿರುವ ಏಳು ಬೆಟ್ಟಗಳು ದೇವಸ್ಥಾನಕ್ಕೆ ಮಾತ್ರ ಸೇರಿದ್ದು ಅದನ್ನು ಬೇರೆ ಯಾರೂ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ. ದೇವಸ್ಥಾನವಿರುವ ಬೆಟ್ಟಗಳಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಕಾರ್ಯನಿರ್ವಹಿಸಲು ಯಾರಿಗೂ ಅನುಮತಿ ಇಲ್ಲ. ಈ ಪ್ರದೇಶಕ್ಕೆ ಹೊಂದಿಕೊಂಡಿರುವ ಮುம்தாಜ್ ಹೋಟೆಲ್‌ಗೆ ಈ ಹಿಂದೆ ಅನುಮತಿ ನೀಡಲಾಗಿತ್ತು. 35.32 ಎಕರೆ ಪ್ರದೇಶದಲ್ಲಿ ಹೋಟೆಲ್ ನಿರ್ಮಿಸಲು ಯೋಜಿಸಲಾಗಿತ್ತು. ಆದರೆ, ಹೋಟೆಲ್ ಆಡಳಿತ ಮಂಡಳಿಯು ಸಸ್ಯಾಹಾರಿ ಊಟವನ್ನು ಮಾತ್ರ ನೀಡಲು ಮುಂದಾಗಿದ್ದರೂ, ಈ ಪ್ರದೇಶದಲ್ಲಿ ಯಾವುದೇ ವ್ಯಕ್ತಿಗೂ ಅನುಮತಿ ನೀಡಲಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page