
ತೆಂಕತಿಟ್ಟು ಯಕ್ಷಗಾನದ ಮೊದಲ ಮಹಿಳಾ ಭಾಗವತೆ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲೀಲಾವತಿ ಬೈಪಾಡಿತ್ತಾಯ(77) ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ.
ಇವರು ಯಕ್ಷಗಾನ ಕ್ಷೇತ್ರದಲ್ಲಿ ನಾಲ್ಕು ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಮನೆ ಮಾತಾಗಿದ್ದರು. ತೆಂಕತಿಟ್ಟಿನ ಅಗ್ರಮಾನ್ಯ ಹಿಮ್ಮೇಳ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯ ಇವರನ್ನು ಮದುವೆಯಾದ ಬಳಿಕ ಯಕ್ಷಗಾನ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ಇವರಿಗೆ ರಾಜ್ಯ ಸರಕಾರದ ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ,ಹಿರಿಯ ನಾಗರಿಕರು ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಆಳ್ವಾಸ್ ನುಡಿಸಿರಿ ಪ್ರಶಸ್ತಿ ಉಲ್ಲಾಲ ಅಬ್ಬಕ್ಕ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳು ಇವರ ಕಂಠಸಿರಿಗೆ ಒಳಿತು ಬಂದಿದೆ.