” ಇದೊಂದು ಪರೀಕ್ಷೆಯ ಸಮಯ ನ್ಯಾಯಾಲಯದ ಮೇಲೆ ನಂಬಿಕೆ ಇಟ್ಟು, ತಾಳ್ಮೆಯಿಂದ ಇರಿ

ನಟ ದರ್ಶನ್ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದು, ದರ್ಶನ್ ಅಭಿಮಾನಿಗಳು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದು ಇದೀಗ ಈ ವಿಚಾರವಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಟನ ಅಭಿಮಾನಿಗಳಿಗೆ ಧೈರ್ಯ ತುಂಬಿದ್ದಾರೆ.
ಇದೊಂದು ಪರೀಕ್ಷೆಯ ಸಮಯ, ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ ಅಭಿಮಾನಿಗಳನ್ನು ತಮ್ಮ ಹೃದಯದಲ್ಲಿ ಹೊತ್ತಿರುವುದು ನಿಮಗೆ ಗೊತ್ತಿದೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ ನಿಮ್ಮ ಆತಂಕವನ್ನು ದರ್ಶನ್ ರವರಿಗೆ ತಲುಪಿಸಿದ್ದೇನೆ ಅವರು ಕೂಡ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ ನ್ಯಾಯಾಲಯದ ಮೇಲೆ ನಂಬಿಕೆ ಇಟ್ಟು ತಾಳ್ಮೆಯಿಂದ ಇರಿ ಎಂದು ವಿಜಯಲಕ್ಷ್ಮಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.