
ನಟ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಹಾಯಾಗಿ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇರುವ ಫೋಟೋ ವೈರಲ್ ಆಗಿದ್ದು ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಮಾತನಾಡಿ ಜೈಲಿನ ಏಳು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲು ಆದೇಶ ಹೊರಡಿಸಿದ್ದಾರೆ ಎಂದು ಹೇಳಿದ್ದಾರೆ.
ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇನೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್ಫಾರ್ ಮಾಡ್ತೇನೆ. ಪದೇ ಪದೇ ಈ ರೀತಿ ಆಗಬಾರದು. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ’ ಎಂದು ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ಊಟದ ವಿಚಾರ ಬಗ್ಗೆ ಮಾತನಾಡಿದ ಅವರು ‘ದರ್ಶನ್ಗೆ ಚಿಕನ್ ಬಿರಿಯಾನಿ ಕೊಟ್ಟಿಲ್ಲ. ಜೈಲಿನ ನಿಯಮದಂತೆ ನಡೆಯಲಾಗುತ್ತಿದೆ. ಈಗ ನಡೆದ ಘಟನೆ ಸಮರ್ಥಿಸಿಕೊಳ್ಳುತ್ತಿಲ್ಲ’ ಎಂದು ಹೇಳಿದ್ದಾರೆ.ಜೈಲರ್ಗಳಾದ ಶರಣಬಸವ ಅಮೀನ್ಗಢ, ಖಂಡೇವಾಲ್, ಸಹಾಯಕ ಜೈಲರ್ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್ ತಲವಾರ್, ಜೈಲಿನ ಹೆಡ್ ವಾರ್ಡರ್ಗಳಾದ ವೆಂಕಪ್ಪ, ಸಂಪತ್, ವಾರ್ಡರ್ ಬಸಪ್ಪ ಎಂಬವರು ಸಸ್ಪೆಂಡ್ ಆಗಿದ್ದಾರೆ.













