
ಇಂದು ಚಿಕ್ಕಮಗಳೂರಿನ ಕಳಸದಲ್ಲಿ ನಟಿ ಮಾನ್ವಿತಾ ಕಾಮತ್ ಮೈಸೂರು ಹುಡುಗ ಅರುಣ್ ಕುಮಾರ್ ಜೊತೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಈ ಮದುವೆ ಸಮಾರಂಭದಲ್ಲಿ ಎರಡು ಕುಟುಂಬದ ಸದಸ್ಯರು ಮತ್ತು ಸಿನಿಮಾ ರಂಗದ ಗಣ್ಯರು ಹಾಗೂ ಆಪ್ತರು ಪಾಲ್ಗೊಂಡಿದ್ದರು. ನಿಧಿ ಸುಬ್ಬಯ್ಯ, ಶ್ರುತಿ ಹರಿಹರನ್, ರಿಲಾಕ್ಸ್ ಸತ್ಯ ನಟ ಪ್ರಭು ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎಂದು ಮಾನ್ವಿತ ಹೇಳಿದ್ದಾರೆ.






























































































































