
ಮುಂಬೈ: ದಿಶಾ ಸಾಲ್ಯಾನ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗೆಯೊಂದು ಆಗಿದ್ದು ಅದೇನೆಂದರೆ ಶಿವಸೇನೆ ಮುಖಂಡ ಆದಿತ್ಯ ಠಾಕ್ರೆ, ಬಾಲಿವುಡ್ ನಟಿ ರಿಯಾ ಚಕ್ರವರ್ತಿ, ದಿನೋ ಮೊರೆಯಾ ಮತ್ತು ಸೂರಜ್ ಪಾಂಚೋಲಿ ಸೇರಿದಂತೆ ಇತರರ ಹೆಸರನ್ನು ಎಫ್ ಐಆರ್ ನಲ್ಲಿ ದಾಖಲಿಸಿರುವುದಾಗಿ ತಿಳಿದು ಬಂದಿದೆ.
ದಿಶಾ ಸಾಲ್ಯಾನ್ ಪರ ವಕೀಲರು ಮಾತನಾಡಿ ನಾವು ಇಂದು ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಲಿಖಿತ ದೂರನ್ನು ದಾಖಲಿಸಿದ್ದು ಇದನ್ನು ಕ್ರೈಂ ಬ್ರಾಂಚ್ ಪೊಲೀಸರು ಸ್ವೀಕರಿಸಿದ್ದಾರೆ.
ಈ ಹಿಂದೆ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಈ ಪ್ರಕರಣದ ದಿಕ್ಕು ತಪ್ಪಿಸುವಲ್ಲಿ ಹಾಗೂ ಸಾರ್ವಜನಿಕರನ್ನು ತಪ್ಪು ದಾರಿಗೆಳೆದು ಆದಿತ್ಯ ಠಾಕ್ರೆಯನ್ನು ರಕ್ಷಿಸುವಲ್ಲಿ ಸಿಂಗ್ ಪ್ರಮುಖ ಸೂತ್ರಧಾರಿ ಆಗಿದ್ದರು ಎಂದು ದೂರಿನಲ್ಲಿ ವಿವರಿಸಲಾಗಿದೆ.
ದಿ. ನಟ ಸುಶಾಂತ್ ಸಿಂಗ್ ರಜಪೂತ ಅವರ ಮಾಜಿ ಮ್ಯಾನೇಜರ್ ಆಗಿದ್ದ 28 ವರ್ಷದ ದಿಶಾ ಸಾಲ್ಯಾನ್ 2020 ರ ಜೂನ್ 8ರಂದು ಮಲಾಡ್ ನ ತಮ್ಮ ನಿವಾಸದ 14ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದರು. ಈ ಪ್ರಕರಣವು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು.