
ನವದೆಹಲಿ: ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿ ತಿಹಾರ್ ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್ ಇದೀಗ ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದಾರೆ.
ಸಿಬಿಐ ಕಳೆದ ವಾರ ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಕೋರಿದ್ದು ಬುಧವಾರ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲು ಸಿಬಿಐ ಅನುಮತಿಯನ್ನು ಪಡೆದುಕೊಂಡಿದೆ. ಸೋಮವಾರ ಸಿಬಿಐ ತಿಹಾರ್ ಜೈಲಿನಲ್ಲೇ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸಾಕ್ಷ್ಯಗಳು ಲಭ್ಯವಾಗಿದೆ ಎಂದು ಸಿಬಿಐ ಕೋರ್ಟ್‌ಗೆ ಮಾಹಿತಿ ನೀಡಿದೆ