
ದೇಶದಲ್ಲಿ ಜುಲೈ ಒಂದರಿಂದ ಐಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್, ಕ್ರಿಮಿನಲ್ ಪ್ರೊಸೀಜರ್ ಕೋಡ್ ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಹಿಂತೆ, ಮತ್ತು ಭಾರತೀಯ ಸಾಕ್ಷ ಎಂಬ ಮೂರು ಮಾದರಿಯ ಕಾನೂನುಗಳು ಜಾರಿಗೆ ಬರಲಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ.
ಡಿಸೆಂಬರ್ 2023 ರಲ್ಲಿ, ಈ ಮೂರು ಕಾನೂನುಗಳು ಸಂಸತ್ ನಲ್ಲಿ ಅಂಗೀಕಾರಗೊಂಡಿದ್ದು, ಜುಲೈ ಒಂದರಿಂದ 3 ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರಲಿವೆ, ಅವುಗಳ ಅನುಷ್ಠಾನಕ್ಕೆ ಅಗತ್ಯ ತರಬೇತಿ ಈಗಾಗಲೇ ನಡೆಯುತ್ತಿದೆ ಎಂದು ಕೊಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ಸಂದರ್ಭದಲ್ಲಿ ತಿಳಿಸಿದ್ದಾರೆ.