
ಉಡುಪಿ/ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸುವುದಾಗಿ ಇಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in ಲಿಂಕ್ ಮೂಲಕ ಅಥವಾ KarnatakaOne Mobile App ಬಳಸಿ ಪರಿಶೀಲಿಸಬಹುದು ಎಂದು ತಿಳಿಸಲಾಗಿದೆ.
ಇದಲ್ಲದೆ, ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಹಾಗೂ ಎಸ್ಎಮ್ಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿ ಕಳುಹಿಸುವ ವ್ಯವಸ್ಥೆಯನ್ನು ಮಂಡಳಿ ಮಾಡಿದೆ ಎಂದು ತಿಳಿದುಬಂದಿದೆ.
ಈ ಬಾರಿ ಮೊದಲ ಬಾರಿಗೆ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕವೂ ಲಭ್ಯವಾಗುವಂತೆ ಮಾಡಲಾಗಿದೆ. ಏಪ್ರಿಲ್ 9ರ ಮಧ್ಯಾಹ್ನ 3 ಗಂಟೆಯಿಂದ https://www.digilocker.gov.in ವೆಬ್ಸೈಟ್ನಲ್ಲಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಇದೇ ವೇಳೆ, ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೂ ಏಪ್ರಿಲ್ 9ರ ಮಧ್ಯಾಹ್ನ 3 ಗಂಟೆಯಿಂದ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದೆ.








