
ಮಂಗಳೂರು: ಎಸ್‌ಐಟಿ ಮುಖ್ಯಸ್ಥ ಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದ ಅಧಿಕಾರಿಗಳ ತಂಡವು ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆ ನಡೆಸಲು ಇಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಕ್ವಾಟ್ರಸ್‌ನಲ್ಲಿ ಎಸ್‌ಐಟಿ ಕಚೇರಿ ಆರಂಭಿಸಲಿದೆ.
ಎಸ್‌ಐಟಿ ಮುಖ್ಯಸ್ಥ ಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದ ಅಧಿಕಾರಿಗಳ ತಂಡವು ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಕ್ವಾಟ್ರಸ್‌ನಲ್ಲಿ ಎಸ್‌ಐಟಿ ಕಚೇರಿ ಆರಂಭಿಸಲಿದೆ.
ಎಸ್ಐಟಿ ಯು ಈಗಾಗಲೇ ಎಲ್ಲಾ ವ್ಯವಸ್ಥೆಗಳನ್ನ ಮಾಡಿಕೊಂಡಿದ್ದು ಶವಗಳನ್ನು ಹೂತಿರುವ ಪ್ರಕರಣದೊಂದಿಗೆ ಇನ್ನಷ್ಟು ದೂರುಗಳು ಎಸ್‌ಐಟಿ ಕಚೇರಿಯಲ್ಲಿ ದಾಖಲಾಗುವ ನಿರೀಕ್ಷೆಯಿದೆ.





