
ಕುಂದಾಪುರ: ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ನನಗೆ ಇಂತಿಷ್ಟು ಅಂಕ ಬರಬೇಕೆಂದು ಚೀಟಿ ಬರೆದು ಅದನ್ನು ಹುಂಡಿಗೆ ಹಾಕಿ ದೈವ ದೇವರಲ್ಲಿ ಜಸ್ಟ್ ಪಾಸ್ ಮಾಡಿಸುವಂತೆ ಮನವಿಯನ್ನು ಮಾಡಿದ್ದು ಇದೀಗ ಈ ಚೀಟಿ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಬಾರಿ ಸುದ್ದಿ ಮಾಡುತ್ತಿದೆ.
ಕುಂದಾಪುರದ ಹೊಳ ಮಗ್ಗಿ ಹೊರ ಬೊಬ್ಬರ್ಯ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಚೀಟಿಯೊಂದು ಪತ್ತೆಯಾಗಿದ್ದು, ವಿದ್ಯಾರ್ಥಿಯೋರ್ವ ಈ ಚೀಟಿಯಲ್ಲಿ ನನಗೆ ಇಂತಿಷ್ಟು ಅಂಕ ಬರುವಂತೆ ಮಾಡಿ ಪಾಸ್ ಮಾಡಿಸು ಅಂತ ಬರೆದು ದೈವಕ್ಕೆ ಮನವಿ ಮಾಡಿದ್ದಾನೆ. ದೈವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಯುವ ವೇಳೆ ವಿದ್ಯಾರ್ಥಿ ಜಸ್ಟ್ ಪಾಸ್ ಮಾಡುವಂತೆ ಕೋರಿದ್ದ ಚೀಟಿ ಲಭ್ಯವಾಗಿದ್ದು, ಇದರ ಫೋಟೋ ಇದೀಗ ಭಾರೀ ವೈರಲ್ ಆಗುತ್ತಿದೆ.