ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

ಹಿಂದಿ ಬಿಗ್ ಬಾಸ್ 13ರ ಸ್ಪರ್ಧಿಯಾಗಿದ್ದ ನಟಿ ಶೆಫಾಲಿ ಜರಿವಾಲಾ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
42 ವರ್ಷದ ಶೆಫಾಲಿ ಮುಂಬೈನ ಅಂಧೇರಿ ಲೋಖಂಡ್ವಾಲಾದಲ್ಲಿ ವಾಸಿಸುತ್ತಿದ್ದು ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಶೆಫಾಲಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಶೆಫಾಲಿ ಕೊನೆಯುಸಿರೆಳೆದಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.
ಶೆಫಾಲಿ ಅವರು ಪುನೀತ್ ರಾಜ್ಕುಮಾರ್ ಜೊತೆ ಹುಡುಗರು ಚಿತ್ರದಲ್ಲಿ ‘ನಾ ಬೋರ್ಡು ಇರದ ಬಸ್ಸನು’ ಹಾಡಿಗೆ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದರು. ಸದ್ಯ ಶೆಫಾಲಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.






















































