30.9 C
Udupi
Wednesday, February 11, 2026
spot_img
spot_img
HomeBlog"ನಾನು ದೆಹಲಿಗೆ ಹೋಗುತ್ತಿಲ್ಲ. ನನ್ನನ್ನು ಕರೆಯದೆ ನಾನ್ಯಾಕೆ ಹೋಗಲಿ?": ಸಿಎಂ ಸಿದ್ದರಾಮಯ್ಯ

“ನಾನು ದೆಹಲಿಗೆ ಹೋಗುತ್ತಿಲ್ಲ. ನನ್ನನ್ನು ಕರೆಯದೆ ನಾನ್ಯಾಕೆ ಹೋಗಲಿ?”: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನನಗೆ ಇಲ್ಲಿ ಕೆಲಸವಿದೆ. ಹೀಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ. ನನ್ನನ್ನು ಕರೆಯದೆ ನಾನ್ಯಾಕೆ ಹೋಗಲಿ ಎಂದು ಹೇಳಿದ್ದಾರೆ.

ಅಧಿಕಾರ ಹಂಚಿಕೆ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮಾಧ್ಯಮಗಳು ಪದೇ ಪದೆ ಅದನ್ನೇ ಕೇಳುವುದು ಸರಿಯಲ್ಲ. ಈ ವಿಚಾರದಲ್ಲಿ ಹೈಕಮಾಂಡ್‌ ಹೇಳಿದ್ದೇ ಅಂತಿಮ ಎಂದು ಈಗಾಗಲೇ ಹೇಳಿದ್ದೇನೆ. ಹೈಕಮಾಂಡ್‌ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಪಾಲಿಸುತ್ತೇನೆ. ಇನ್ನು, ನನಗೆ ದೆಹಲಿಗೆ ಬರುವಂತೆ ತಿಳಿಸಿಲ್ಲ. ಅವರು ಕರೆಯದೆ ನಾನು ಏಕೆ ಹೋಗಲಿ? ನಾನು ದೆಹಲಿಗೆ ಹೋಗುವುದಿಲ್ಲ. ನನಗೆ ಇಲ್ಲೇ ಬಹಳಷ್ಟು ಕೆಲಸವಿದ್ದು, ಬಜೆಟ್‌ ಸಿದ್ಧತಾ ಕಾರ್ಯಗಳಿವೆ ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್‌ ಗೈರಾಗುತ್ತಿರುವ ಕುರಿತು ನನಗೆ ಪತ್ರ ಬರೆದಿದ್ದಾರೆ. ಅಸ್ಸಾಂ ಚುನಾವಣಾ ಸಭೆಯಲ್ಲಿ ಪಾಲ್ಗೊಳ್ಳಬೇಕಿರುವ ಕಾರಣ ಸಭೆಗೆ ಬರಲಾಗುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page