ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮ

ನಾಲ್ಕೂರು ನರಸಿಂಗರ ಸ್ಮಾರಕ ಸರಕಾರಿ ಪದವಿ ಪೂರ್ವ ಕಾಲೇಜು ಶಿರ್ಲಾಲು ಪ್ರೌಢಶಾಲಾ ವಿಭಾಗ ಇಲ್ಲಿ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು ಈ ಸಂದರ್ಭದಲ್ಲಿ ಕುದುರೆಮುಖ ವನ್ಯಜೀವಿ ವಿಭಾಗ ಕಾರ್ಕಳ ಇದರ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರಾದ ಶ್ರೀ ಶಿವರಾಮ್ ಬಾಬು ಐಎಫ್ಎಸ್ ಹಾಗೂ ಕಾರ್ಕಳ ವನ್ಯಜೀವಿ ವಲಯದ ವಲಯ ಅರಣ್ಯ ಅಧಿಕಾರಿಗಳಾದ ಶ್ರೀ ಶಶಿಧರ್ ಗೌಡ ಪಾಟೀಲ್ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅರಣ್ಯ ಸಂರಕ್ಷಣಾ ಕ್ರಮಗಳು ಮತ್ತು ಭವಿಷ್ಯದ ಪೀಳಿಗೆಗೆ ಅರಣ್ಯದ ಅಗತ್ಯತೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಕೊಂಡರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಗುಣಪಾಲ ಕಡಂಬ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಬೇಬಿ ಕೆ ಈಶ್ವರಮಂಗಲ ಮುಖ್ಯ ಶಿಕ್ಷಕ ನರಸಿಂಹ ನಾಯಕ್ ಸೇರಿದಂತೆ ಅರಣ್ಯಾಧಿಕಾರಿಗಳು ಶಿಕ್ಷಕರು ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.