
ನಿಟ್ಟೆ ಸಮೂಹ ಸಂಸ್ಥೆಗಳ ಸ್ಥಾಪಕರು, ನಿಟ್ಟೆ ವಿ.ವಿ. ಕುಲಪತಿಗಳು, ಶಿಕ್ಷಣ ತಜ್ಙರು, ಸಾವಿರಾರು ಜನರ ಉದ್ಯೋಗದಾತರು, ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಿಗೆ ಕೊಡುಗೆ ನೀಡಿದ ಮಹನೀಯರು, ನಮ್ಮ ಮಾರ್ಗದರ್ಶಕರಾದ ನಿಟ್ಟೆ ಡಾ. ಎನ್. ವಿನಯ ಹೆಗ್ಡೆ ಅವರ ನಿಧನವು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ. ವಿನಯ ಹೆಗ್ಟೆಯವರು ನಿಟ್ಟೆಯಂತಹಾ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿ ಇಂದು ತಾಂತ್ರಿಕ, ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಸ್ಪತ್ರೆಗಳು, ಲೆಮಿನಾ ಪೌಂಡ್ರೀಸ್ ಮುಂತಾದ ಕೈಗಾರಿಕೆಗಳನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳ ಜೀವನ ಬೆಳಗಿದವರು ಮತ್ತು ಸಾವಿರಾರು ಜನರಿಗೆ ಉದ್ಯೋಗದಾತರಾಗಿ ದೇಶದ ಆರ್ಥಿಕತೆ ಬಹಳಷ್ಟು ಕೊಡುಗೆ ನೀಡಿದವರು, ಶಿಕ್ಷಣ ತಜ್ಙರಾಗಿ, ಯಶಸ್ವಿ ಉದ್ಯಮಿಯಾಗಿ ಸಮಾಜದ ಆಗುಹೋಗುಗಳಿಗೆ ಸ್ಪಂದಿಸುತ್ತಾ ಮೇರು ವ್ಯಕ್ತಿತ್ವನ್ನು ಹೊಂದಿದ್ದ ಅವರ ಅಗಲುವಿಕೆಯು ಶಿಕ್ಷಣ ಕ್ಷೇತ್ರ ಮಾತ್ರವಲ್ಲದೆ ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಿಗೂ ತುಂಬಲಾರದ ನಷ್ಟವಾಗಿದೆ. ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರಣಿಸಲಿ, ಹಾಗೂ ಅವರ ಕುಟುಂಬ ವರ್ಗಕ್ಕೆ , ಅಪಾರ ಅಭಿಮಾನಿಗಳಿಗೆ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯು ದೊರಕಲಿ ಎಂದು ಉದಯ ಶೆಟ್ಟಿ ಮುನಿಯಾಲು ಅವರು ತಮ್ಮ ಸಂತಾಪ ಪತ್ರದಲ್ಲಿ ತಿಳಿಸಿದ್ದಾರೆ.





