
ಶಿಕ್ಷಣ ತಜ್ಞ ,ಉದ್ಯಮಿ, ಸಮಾಜಸೇವಕ ನಿಟ್ಟೆ ಡಿಮ್ಡ್ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎನ್ ವಿನಯ್ ಹೆಗ್ಡೆ (86) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಲೋಕಸಭಾ ಸ್ಪೀಕರ್ ಆಗಿದ್ದ ದಿ. ಜಸ್ಟಿಸ್ ಕೆ ಎಸ್ ಹೆಗ್ಡೆ ಅವರ ಪುತ್ರರಾಗಿದ್ದ ವಿನಯ್ ಹೆಗ್ಡೆ, ತಂದೆಯ ಆಶಯದಂತೆ 1979ರಲ್ಲಿ ನಿಟ್ಟೆ ಎಜುಕೇಶನ್ ಟ್ರಸ್ಟ್ ಸ್ಥಾಪಿಸಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿಗೆ ಕಾರಣರಾಗಿದ್ದರು.
ಇವರು ಪತ್ನಿ,ಪುತ್ರ ಪುತ್ರಿಯನ್ನು ಅಗಲಿದ್ದು, ಇವರ ಮೃತ ದೇಹದ ಸಾರ್ವಜನಿಕ ದರ್ಶನಕ್ಕೆ ಶಿವಬಾಗ್ ನಲ್ಲಿರುವ ಅವರ ನಿವಾಸದಲ್ಲಿ ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಾಗೂ ನಿಟ್ಟೆ ಕ್ಯಾಂಪಸ್ ನಲ್ಲಿ ಸಂಜೆ 4:30 ರಿಂದ 6 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.





