
ನಿಟ್ಟೆ ಪರಿಗಣೆತ ವಿಶ್ವವಿದ್ಯಾಲಯದ ಅಧೀನ ಸಂಸ್ಥೆ ಡಾI ನಿಟ್ಟೆ ಶಂಕರ ಅಡ್ಯಂತಾಯ ಪ್ರಥಮ ದರ್ಜೆ ಕಾಲೇಜು ಹಾಗೂ ಇಲ್ಲಿನ ಹಿರಿಯ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಜಾಗತಿಕ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ – 2025 ಹಾಗೂ 1997-2000 ಇಸವಿಯ ಬೆಳ್ಳಿ ವರ್ಷದ ವಿದ್ಯಾರ್ಥಿಗಳ ಸಮಾಗಮ ಡಿಸೆಂಬರ್ 27ರಂದು ನಿಟ್ಟೆ ಕಾಲೇಜಿನ ಸಂಭ್ರಮ ಹವಾನಿಯಂತ್ರಿತ ಸಭಾಂಗಣದಲ್ಲಿ ನಡೆಯಿತು.
ನಿಟ್ಟೆ ವಿದ್ಯಾ ಸಂಕೀರ್ಣದ ಅಭಿವೃದ್ಧಿ ಮತ್ತು ನಿರ್ವಹಣೆ ನಿರ್ದೇಶಕರಾದ ಶ್ರೀ ಎ. ಯೋಗೀಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿಟ್ಟೆ ವಿಶ್ವ ವಿದ್ಯಾಲಯದ ಉಪಕುಲಪತಿ ಡಾI ಎಂ.ಎಸ್. ಮೂಡಿತ್ತಾಯ, ನಿಟ್ಟೆ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಡಾI ನಿರಂಜನ್ ಎನ್. ಚಿಪ್ಲೂಂಕರ್ ಹಾಗೂ ನಿಟ್ಟೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ಹಾಗೂ ಹಳೆ ವಿದ್ಯಾರ್ಥಿಗಳ ಸಂಘಟನೆಗಳ ನಿರ್ದೇಶಕರಾಗಿರುವ ಶ್ರೀ ಪ್ರಸನ್ನ ಆರ್. ಕೈಲಾಜೆ ಉಪಸ್ಥಿತರಿದ್ದರು. ಪೂರ್ವ ವಿದ್ಯಾರ್ಥಿನಿ ಶ್ರೀಮತಿ ಅನುರಾಧಾ ಭಟ್ ಪ್ರಾರ್ಥಿಸಿದರು. ಪ್ರಾಂಶುಪಾಲೆ ಡಾI ವೀಣಾ ಬಿ.ಕೆ ಸ್ವಾಗತಿಸಿದರು. ಪೂರ್ವ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಶ್ರೀ ಅಬ್ದುಲ್ ರಝಾಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿ ಡಾI ಎಂ ಎಸ್ ಮೂಡಿತ್ತಾಯ ತಾನು ಸಂಸ್ಥೆಯಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ಇಲ್ಲಿನ ಸಹೋದ್ಯೋಗಿ ಗಳು ಹಾಗೂ ವಿದ್ಯಾರ್ಥಿಗಳು ನೀಡಿರುವ ಪ್ರೀತಿ, ಸಹಕಾರದಿಂದ ತಾನು ಈಗ ಉನ್ನತ ಹುದ್ದೆಯನ್ನು ಅಲಂಕರಿಸಲು ಸಹಕಾರಿಯಾಗಿದೆ ಎಂದು ಹಳೆ ನೆನಪುಗಳನ್ನು ಮೆಲುಕು ಹಾಕಿದರು. ಇನ್ನೋರ್ವ ಮುಖ್ಯ ಅತಿಥಿ ಡಾI ನಿರಂಜನ್ ಪೂರ್ವ ವಿದ್ಯಾರ್ಥಿಗಳು ಕಲಿತ ಸಂಸ್ಥೆಯ ಜೊತೆ ನಿಕಟ ಸಂಬಂಧವಿರಿಸಿಕೊಂಡು ಸಂಸ್ಥೆಯ ಅಭಿವೃದ್ಧಿಗೆ ಕೈಜೋಡಿಸುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜು ಆರಂಭದಿಂದ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಹಾಗೂ ಸಹಾಯಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದವರನ್ನು ಗೌರವಿಸಲಾಯಿತು. ಹಾಗೆಯೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಸಮಾರಂಭದ ಬಳಿಕ ಹಿರಿಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಸ್ನೇಹ ಮಿಲನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಮನೋರಂಜನಾ ಕ್ರೀಡೆಗಳು ನಡೆದವು. ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀ ಸತೀಶ್ ಶೆಟ್ಟಿ ವಂದಿಸಿದರು. ಹಿರಿಯ ವಿದ್ಯಾರ್ಥಿನಿ ಶ್ರೀಮತಿ ದೇಚಮ್ಮ ಎಂ ಎ ಕಾರ್ಯಕ್ರಮ ನಿರೂಪಿಸಿದರು. ಇನ್ನೋರ್ವ ಹಳೆ ವಿದ್ಯಾರ್ಥಿನಿ ಶ್ರೀಮತಿ ಪ್ರಸುಧಾ ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮಗಳ ನಿರೂಪಣೆಗೈದರು. ಹಳೆ ವಿದ್ಯಾರ್ಥಿ ಸಂಘದ ಸಂಯೋಜಕರಾದ ಶ್ರೀಮತಿ ಅರ್ಚನಾ ಭಟ್ ಹಾಗೂ ಹಾಲಿ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಸಹಕರಿಸಿದರು.





