31 ಜನ ಸಾವನ್ನಪ್ಪಿದ್ದು ಹಲವು ಮಂದಿ ನಾಪತ್ತೆ

ಜಮ್ಮು ಕಾಶ್ಮೀರ: ಭಾರಿ ಮಳೆಯ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದ ಕತ್ರಾದ ಅರ್ಧಕುಮಾರಿ ಬಳಿ ಮಾತಾ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ ಉಂಟಾಗಿದ್ದು ಪರಿಣಾಮ ಕನಿಷ್ಠ 31 ಜನರು ಸಾವನ್ನಪ್ಪಿದ್ದು 23 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಜಮ್ಮುವಿನಲ್ಲಿ ಸೇತುವೆ, ವಿದ್ಯುತ್ ತಂತಿಗಳು, ಮೊಬೈಲ್ ಪವರ್ ಗಳು ಕುಸಿದು ಬಿದ್ದು ಜಿಲ್ಲೆಯಾದ್ಯಂತ ನದಿ ತೀರದ ಸುಮಾರು 3500ಕ್ಕೂ ಹೆಚ್ಚು ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.
ಭೂಕುಸಿತ ಉಂಟಾದ ಹಿನ್ನೆಲೆ ರಸ್ತೆಗಳು ಕುಸಿದು ಹಲವು ಮಂದಿ ಯಾತ್ರಾರ್ಥಿಗಳು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವೈಷ್ಣೋದೇವಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.