
ಶ್ರೀನಗರ: ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳು ರದ್ದಾಗಿದ್ದು ಹೀಗಾಗಿ ಅಮರನಾಥ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾಶ್ಮೀರದ ವಿಭಾಗೀಯ ಆಯುಕ್ತ ವಿ ಕೆ ಭಿದುರಿ ಭಾನುವಾರ ಅಮರನಾಥ ಯಾತ್ರೆಯ ಪಹಲ್ಗಾಮ್ ಮತ್ತು ಬಲ್ಟಾಲ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದಿದೆ ಎಂದು ಹೇಳಿದ್ದು ಮಳೆಯ ಕಾರಣ, ಅಮರನಾಥ ಯಾತ್ರೆಯ ಬಾಲ್ಟಾಲ್ ಅಕ್ಷದ ಮೇಲೆ ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯವನ್ನು ಕೈಗೊಳ್ಳಬೇಕಾಗಿದೆ. ಯಾತ್ರಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಸೋಮವಾರ ಬಾಲ್ಟಾಲ್ ಮಾರ್ಗದಿಂದ ಯಾವುದೇ ಯಾತ್ರೆಗೆ ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.













