26 C
Udupi
Tuesday, July 1, 2025
spot_img
spot_img
HomeBlogನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಕಾನೂನು ಜಾರಿ ಮಾಡಿದ...

ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಕಾನೂನು ಜಾರಿ ಮಾಡಿದ ಕೇಂದ್ರ ಸರ್ಕಾರ

NEET ಮತ್ತು UGC NET ಪರೀಕ್ಷೆ ನಡೆದ ಅಕ್ರಮದ ಆರೋಪದ ಚರ್ಚೆ ನಡೆಯುತ್ತಿದ್ದು ಈಗಾಗಲೇ ನೀಟ್ ಪರೀಕ್ಷೆಯನ್ನು ರದ್ದು ಮಾಡಿ ತನಿಖೆ ಮುಂದುವರಿಯುತ್ತಿದೆ. ಇದರ ಮಧ್ಯೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು ಅದೇನೆಂದರೆ ಕೇಂದ್ರ ಶಿಕ್ಷಣ ಸಚಿವಾಲಯ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆಯನ್ನು ಜಾರಿಗೆ ತರಲು ಅಧಿಸೂಚನೆ ನೀಡಿದೆ.

ದೇಶಾದ್ಯಂತ ನಡೆಯುವ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ನಡೆಯುವ ಅನ್ಯಾಯ ಹಾಗೂ ಅಕ್ರಮವನ್ನು ತಡೆಗಟ್ಟಲು 2024ಕ್ಕೆ ಅನುಗುಣವಾಗಿ ಈ ಕಾಯಿದೆಯನ್ನು ಜಾರಿ ಮಾಡಲಾಗಿದೆ.

2024 ಫೆಬ್ರವರಿಯಲ್ಲಿ ನಡೆದ ಸಂಸತ್ ಸಭೆಯಲ್ಲಿ ಈ ಕಾನೂನನ್ನು ಅಂಗೀಕರಿಸಲಾಗಿದ್ದು ಈ ಮೂಲಕ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಮೋಸ, ಅಕ್ರಮ ನಡೆಸುವವರಿಗೆ ಕನಿಷ್ಠ ಮೂರರಿಂದ ಐದು ವರ್ಷಗಳ ಜೈಲು ಶಿಕ್ಷೆ ನೀಡುವ ಬಗ್ಗೆಯೂ ಈ ಕಾನೂನಿನಲ್ಲಿ ಒಳಗೊಂಡಿತ್ತು. ವಂಚನೆ ಏಜೆಂಟ್ಗಳ ಜತೆಗೆ ಕೈಜೋಡಿಸಿರುವವರಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ. ದಂಡ ವಿಧಿಸಲಾಗುವುದು. ಒಬ್ಬ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪು ಪರೀಕ್ಷಾ ಪ್ರಾಧಿಕಾರ, ಸೇವಾ ಪೂರೈಕೆದಾರರು ಅಥವಾ ಯಾವುದೇ ಇತರ ಸಂಸ್ಥೆ ಸೇರಿದಂತೆ ಸಂಘಟಿತ ಅಪರಾಧವನ್ನು ಮಾಡಿದರೆ ಅವರಿಗೆ 5ರಿಂದ 10ವರ್ಷದ ವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಹಾಗೂ 1 ಕೋಟಿ ರೂ. ದಂಡ ವಿಧಿಸಲಾಗುವುದು ಎಂದು ಹೇಳಲಾಗಿದೆ. ತರಬೇತಿ ಏಜೆಂಟ್ ಅಥವಾ ಕೋರ್ಸ್ ಸೆಂಟರ್ಗಳು ಪೇಪರ್ ಸೋರಿಕೆ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಆ ಸಂಸ್ಥೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ನಿಬಂಧನೆಗಳನ್ನು ಹೊಂದಿದೆ ಹಾಗೂ ಪರೀಕ್ಷೆಯ ಪ್ರಮಾಣಾನುಗುಣವಾದ ವೆಚ್ಚವನ್ನು ಸಹ ಅದರಿಂದ ವಸೂಲಿ ಮಾಡಲಾಗುತ್ತದೆ ಎಂದು ಈ ಕಾನೂನಿನಲ್ಲಿ ತಿಳಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page