
ನವದೆಹಲಿ: ವೈದ್ಯಕೀಯ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು, ಈ ಬಾರಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 67 ವಿದ್ಯಾರ್ಥಿಗಳು ಮೊದಲ ರಾಂಕ್ ಪಡೆದಿದ್ದಾರೆ. ಅದಲ್ಲದೆ ನೀಟ್ ಪರೀಕ್ಷೆಯ ಫಲಿತಾಂಶವೂ ಯಾವುದೇ ಮುನ್ಸೂಚನೆಯನ್ನು ನೀಡದೆ ಲೋಕಸಭಾ ಚುನಾವಣೆಯ ಫಲಿತಾಂಶ ದಿನವೇ ಏಕಾಏಕಿ ಪ್ರಕಟಗೊಂಡಿದ್ದು ಇವೆಲ್ಲವೂ ಸಾಕಷ್ಟು ಆರೋಪ, ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಇದೀಗ ಕೇಂದ್ರ ಶಿಕ್ಷಣ ಸಚಿವಾಲಯವು ನಾಲ್ವರು ತಜ್ಞರ ತನಿಖಾ ತಂಡವನ್ನು ರಚಿಸಿದೆ.
ಯುಪಿಎಸ್‌ಸಿ ಮಾಜಿ ಮುಖ್ಯಸ್ಥರ ನೇತೃತ್ವದ ನಾಲ್ವರ ತಂಡ ಆರೋಪಗಳ ಕುರಿತು ತನಿಖೆ ನಡೆಸಲಿದ್ದು, ವಾರದೊಳಗೆ ಬರದಿ ಸಲ್ಲಿಸುವಂತೆ ಕೇಂದ್ರ ಸೂಚಿಸಿದೆ. ಆರು ಪರೀಕ್ಷಾ ಕೇಂದ್ರಗಳಲ್ಲಿ 1500 ಮೀಟರ್ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಲಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಸಲಿದೆ ಎನ್ನಲಾಗುತ್ತಿದೆ.