
ಚೆನ್ನೈ: ಆಯೋಗವೊಂದು ತಮಿಳುನಾಡು ಸರ್ಕಾರಕ್ಕೆ ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆಸಲಾಗುವ ‘ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ’ (ನೀಟ್)ಯನ್ನು ಕಾನೂನು ಅಥವಾ ಶಾಸನ ರಚನೆ ಪ್ರಕ್ರಿಯೆಗಳ ಮೂಲಕ ರದ್ದುಪಡಿಸುವಂತೆ ಮನವಿ ಮಾಡಿ ಮೊದಲ ವರ್ಷದ ವೈದ್ಯಕೀಯ ಕೋರ್ಸ್‌ಗಳಿಗೆ 12ನೇ ತರಗತಿಯ ಅಂಕಗಳನ್ನೇ ಆಧರಿಸಿ ಪ್ರವೇಶಾವಕಾಶ ಕಲ್ಪಿಸುವಂತೆಯೂ ಸಲಹೆ ನೀಡಿದೆ.
ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ನ್ಯಾ। ಎ.ಕೆ. ರಾಜನ್ ನೇತೃತ್ವದ ಅತ್ಯುನ್ನತ ಸಮಿತಿಯು ವಿವಿಧ ಬೋರ್ಡ್‌ಗಳಡಿ ಶಿಕ್ಷಣ ಪಡೆದಿರುವ ವಿದ್ಯಾರ್ಥಿಗಳಿಗೆ ಸಮಾನ ಅವಕಾಶಗಳು ಸಿಗುವಂತೆ ಸರ್ಕಾರ ಮಾಡಬೇಕು ಎಂದು ತನ್ನ ವರದಿಯಲ್ಲಿ ಶಿಫಾರಸು ಮಾಡಿದೆ. ಅಲ್ಲದೆ ಹಲವು ರಾಜ್ಯ ಸರ್ಕಾರಗಳ ಜತೆಗೆ ವರದಿಯನ್ನು ಹಂಚಿಕೊಂಡಿದ್ದು, ನೀಟ್ ಬಡ ವಿದ್ಯಾರ್ಥಿಗಳ ವಿರೋಧಿ ಹಾಗೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದುದಾಗಿದೆ ಎಂಬ ತನ್ನ ವಾದ ಸತ್ಯ ಎಂದು ಸಾಬೀತುಪಡಿಸಲು ಪ್ರಯತ್ನ ಮಾಡಿದೆ.
ಈ ಕನ್ನಡ ಸೇರಿ ವಿವಿಧ ಭಾಷೆಯಲ್ಲಿರುವ ವರದಿಯನ್ನು ಸ್ಟಾಲಿನ್ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.