28.9 C
Udupi
Thursday, April 30, 2026
spot_img
spot_img
HomeBlogನ.26ರಿಂದ ನ.30ರವರೆಗೆ ಧರ್ಮಸ್ಥಳದ ಭಗವಾನ್‌ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ

ನ.26ರಿಂದ ನ.30ರವರೆಗೆ ಧರ್ಮಸ್ಥಳದ ಭಗವಾನ್‌ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ

ಬೆಳ್ತಂಗಡಿ: ನ.26ರಿಂದ ನ.30ರವರೆಗೆ ಕನ್ನಡ ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ, ಕಾರ್ತಿಕ ಮಾಸದ ಮಂಗಳ ಬಹುಳ ಏಕಾದಶಿಯಿಂದ ಅಮಾವಾಸ್ಯೆಯವರೆಗಿನ ಮಂಗಳ ಪರ್ವದಲ್ಲಿ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಭಗವಾನ್‌ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನಡೆಯಲಿದೆ.

ಶಾಸಕ ಹರೀಶ್‌ ಪೂಂಜ ಮತ್ತು ವಿಧಾನ ಪರಿಷತ್‌ ಸದಸ್ಯ ಕೆ.ಪ್ರತಾಪಸಿಂಹ ನಾಯಕ್‌, ಮಾಜಿ ಸದಸ್ಯ ಹರೀಶ್‌ ಕುಮಾರ್‌ ನೇತೃತ್ವದಲ್ಲಿ ನ.26ರಂದು ಮಂಗಳವಾರ 3 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ 25,000ಕ್ಕೂ ಮಿಕ್ಕಿ ಊರ-ಪರವೂರಿನ ಭಕ್ತರು, ಅಭಿಮಾನಿಗಳು ಪಾದಯಾತ್ರೆಯಲ್ಲಿ ಪ್ರಾರ್ಥನೆ ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಬಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ನ.28ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 5.30ರಿಂದ 7 ಗಂಟೆಯವರೆಗೆ ನಾಗಸ್ವರ ವಾದನ, 7 ರಿಂದ 8ರವರೆಗೆ ಸಾತ್ವಿಕ ಸಂಗೀತ, ಬಳಿಕ ನೃತ್ಯಾರ್ಚನೆ ಮತ್ತು ಮಾಯಾವಿಲಾಸ ನೃತ್ಯರೂಪಕ ನಡೆಯಲಿದೆ.

ನ.29ರಂದು ಸಂಜೆ 5 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಉದ್ಘಾಟಿಸಲಿದ್ದಾರೆ. ಬೆಂಗಳೂರು ರಾಜರಾಜೇಶ್ವರೀ ನಗರದ ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನದ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದು ಬಳಿಕ ಸಂಶೋಧಕ ಡಾ. ಜಿ.ಬಿ.ಹರೀಶ್‌, ಡಾ. ಜೋಸೆಫ್‌ ಎನ್‌.ಎಂ., ಮೆಹತಾಬ ಇಬ್ರಾಹಿಂ ಸಾಬ ಕಾಗವಾಡ ಅವರಿಂದ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ 8.30ರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.

ನ.30ರಂದು ಬೆಂಗಳೂರು ಬಹುಶ್ರುತ ವಿದ್ವಾಂಸ ಶತಾವಧಾನೀ ಡಾ. ರಾ. ಗಣೇಶ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು ಲೇಖಕ, ಸಂಶೋಧಕ ಡಾ. ಪಾದೇಕಲ್ಲು ವಿಷ್ಣು ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಡಾ. ಪ್ರಮೀಳಾ ಮಾಧವ, ಡಾ. ಬಿ.ವಿ.ವಸಂತ ಕುಮಾರ್‌, ಪ್ರೊ. ಮೊರಬದ ಮಲ್ಲಿಕಾರ್ಜುನ ಅವರಿಂದ ಉಪನ್ಯಾಸ ನಡೆಯಲಿದ್ದು ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ 8.30ರಿಂದ ಶ್ರೀ ರಾಜೇಶ್‌ ಕೃಷ್ಣನ್‌ ಮತ್ತು ತಂಡದಿಂದ ಸಂಗೀತ ಸಂಜೆ ನೆರವೇರಲಿದೆ. ಪ್ರತಿದಿನ ಸಂಜೆ 6.30 ರಿಂದ ರಾತ್ರಿ 11ರವರೆಗೆ ವಸ್ತು ಪ್ರದರ್ಶನ ಮಂಟಪದಲ್ಲಿ ಹಾಗೂ ಅಮೃತವರ್ಷಿಣಿ ವೇದಿಕೆಯಲ್ಲಿ ಸಾಂಸ್ಕೃತಿಕ-ಸಂಗೀತ ಹಬ್ಬ ನೆರವೇರಲಿದೆ.

ನ.26ರಿಂದ ಡಿ.1ರವರೆಗೆ ಧರ್ಮಸ್ಥಳದ ಪ್ರೌಢಶಾಲಾ ವಠಾರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯಮಟ್ಟದ ವಸ್ತುಪ್ರದರ್ಶನ ನಡೆಯಲಿದ್ದು, ನ.26ರಂದು ಬೆಳಗ್ಗೆ 10.30ಕ್ಕೆ ದ.ಕ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌ ಉದ್ಘಾಟಿಸಲಿದ್ದಾರೆ. ಕೃಷಿ, ಆರೋಗ್ಯ, ವಾಣಿಜ್ಯ, ಶಿಕ್ಷಣ, ಗ್ರಾಮೀಣ ಗುಡಿಕೈಗಾರಿಗಳಿಗೆ ಸಂಬಂಧಿಸಿದ 300 ಕ್ಕೂ ಮಿಕ್ಕಿ ಮಳಿಗೆಗಳು ಇರಲಿವೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page