32.5 C
Udupi
Sunday, May 3, 2026
spot_img
spot_img
HomeBlogಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ನಿಧನ

ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ನಿಧನ

ಕಾರವಾರ: ಜನಪದ ಕೋಗಿಲೆ ಎಂದೇ ಹೆಸರು ಮಾಡಿರುವ ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ನಿಧನರಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿಯ 91 ವರ್ಷದ ಸುಕ್ರಿ ಬೊಮ್ಮಗೌಡ ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.‌

ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಹುಟ್ಟಿದ ಇವರು ಹಾಲಕ್ಕಿ ಜನಾಂಗದ ಜನಪದ ಹಾಡುಗಳನ್ನು ಹಾಡುವ ಮೂಲಕ ಹಳ್ಳಿ ಸೊಗಡನ್ನ ದಿಲ್ಲಿಗೆ ಕೊಂಡೊಯ್ದ ಕೀರ್ತಿ ಇವರದ್ದಾಗಿದೆ. ಇದಲ್ಲದೇ ಮದ್ಯ ಮುಕ್ತ ಗ್ರಾಮ ಮಾಡುವ ಹೋರಾಟದಲ್ಲಿ ಭಾಗಿಯಾದ ಇವರು ತಮ್ಮ ಊರನ್ನು ಮದ್ಯ ಮುಕ್ತ ಗ್ರಾಮವನ್ನಾಗಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇವರು ರಾಜ್ಯ, ರಾಷ್ಟ್ರ ಮಟ್ಟದ ಹಲವು ಪ್ರಶಸ್ತಿ ಪಡೆದಿದ್ದು ಇತ್ತೀಚೆಗೆ ಅನಾರೋಗ್ಯ ಕಾರಣದಿಂದ ಹಾಸಿಗೆ ಹಿಡಿದಿದ್ದರು. ತೀವ್ರ ಉಸಿರಾಟ ಸಮಸ್ಯೆ ಹೊಂದಿದ್ದ ಇವರು ಕೆಲವು ದಿನದ ಹಿಂದೆ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಮರಳಿ ಬಂದಿದ್ದು ಆದರೆ, ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಇಬ್ಬರು ಮೊಮ್ಮೊಕ್ಕಳು, ಓರ್ವ ಸೊಸೆಯನ್ನು ಅಗಲಿದ್ದಾರೆ. ಇಂದು ಬಡಿಗೇರಿಯಲ್ಲಿ ಇವರ ಅಂತ್ಯಸಂಸ್ಕಾರ ನಡೆಯಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page