ವಿಶ್ವ ಪರಿಸರ ದಿನಾಚರಣೆ 2024: ಪರಿಸರ ಸಂರಕ್ಷಣಾ ಕಾನೂನುಗಳ ಬಗ್ಗೆ ಅರಿವು

ಕಾರ್ಕಳ:ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ), ಸ್ವಚ್ಛ ಕಾರ್ಕಳ ಬ್ರಿಗೇಡ್ ಕಾರ್ಕಳ, ಶ್ರೀ ಭುವನೇಂದ್ರ ರೆಸಿಡೆನ್ಷಿಯಲ್ ಸ್ಕೂಲ್, ಕಾರ್ಕಳ ಇವರ ಸಯುಂಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಸಲುವಾಗಿ ಪರಿಸರ ಸಂರಕ್ಷಣಾ ಕಾನೂನುಗಳ ಬಗ್ಗೆ ಅರಿವು ಕಾರ್ಯಕ್ರಮ ಶ್ರೀ ಭುವನೇಂದ್ರ ರೆಸಿಡೆನ್ಷಿಯಲ್ ಸ್ಕೂಲ್, ಕಾರ್ಕಳ ಇಲ್ಲಿ ಇಂದು (ಜೂನ್ .5) ರಂದು ಬೆಳಿಗ್ಗೆ 9:30 ಕ್ಕೆ ಜರಗಿತು.
ಸಮಾರಂಭವನ್ನು ಕಾರ್ಕಳ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾದೀಶರಾದ ಶ್ರೀಮತಿ ಶರ್ಮಿಳಾ ಸಿ.ಎಸ್ ರವರು, ಶಾಲೆಯ ಪ್ರೈಮರಿ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಅವರು ತನ್ನ ಉದ್ಘಾಟನಾ ಭಾಷಣದಲ್ಲಿ ನಾವು ಪರಿಸವನ್ನು ಉಳಿಸಿದರೆ ಮಾತ್ರ ನಮಗೆ ಭೂಮಿಯಲ್ಲಿ ಬದುಕಲು ಸಾಧ್ಯ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಕಾರ್ಕಳ ವಕೀಲ ಸಂಘದ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ಯವರು ಪ್ರತಿ ಒಬ್ಬ ವಿದ್ಯಾರ್ಥಿ ವರ್ಷಕ್ಕೆ ಒಂದು ಮರವನ್ನು ತನ್ನ ಮನೆಯಲ್ಲಿ ನೆಟ್ಟು ಪೋಷಿಸಿಕೊಂಡು ಬರಬೇಕೆಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಯುವ ನ್ಯಾಯವಾದಿ ಮತ್ತು ಸ್ವಚ್ಛ ಕಾರ್ಕಳ ಬ್ರಿಗೇಡ್ ನ ಸದಸ್ಯರಾದ ಎಂ.ಕೆ ವಿಪುಲ್ ತೇಜ್ ರವರು ಭಾರತದ ಸಂವಿಧಾನದಲ್ಲಿ ಪರಿಸರ ಸಂರಕ್ಷಣೆಗೆ ನೀಡಿದ ಆದ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಸಂವಾದ ರೂಪದಲ್ಲಿ ತಿಳಿಸಿದರು. ಅಧ್ಯಕ್ಷತೆ ವಹಿಸಿದ ಶಾಲೆಯ ಸಂಚಾಲಕರಾದ ವೆಂಕಟೇಶ್ ಪ್ರಭು ರವರು ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿ ಪರಿಸರವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಕೊಂಡು ಹೋಗಬೇಕೆಂದು ತಿಳಿಸಿದರು. ಶಾಲಾ ಪ್ರಾಂಶುಪಾಲರಾದ ರಾಘವೇಂದ್ರ ಸಾಲ್ಯಾನ್ ಅವರು ವಂದನಾರ್ಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸ್ವಚ್ಛ ಕಾರ್ಕಳ ಬ್ರಿಗೇಡ್ ನ ಸದಸ್ಯರಾದ ಶ್ರೀಮತಿ ಮಾನಸ ಉಪಾಧ್ಯಾಯ ಮತ್ತು ಶ್ರೀಮತಿ ಸಹನಾ ಶ್ರೀಶಾ ಉಪಸ್ಥಿತರಿದ್ದರು.