
ವಾಷಿಂಗ್ಟನ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಪಾಕಿಸ್ತಾನದ ವಾಯುಪಡೆಯು ಏಳು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಹೇಳಿ ತಮ್ಮನ್ನು ತಾವೇ ಹೊಗಳಿಕೊಂಡಿದ್ದು ಭಾರತ ಇದನ್ನು ಆಧಾರರಹಿತ ಎಂದು ತಳ್ಳಿಹಾಕಿತು.
ಒಂದು ಚಿತ್ರ ಸಾವಿರ ಪದಗಳನ್ನು ಹೇಳುತ್ತದೆ, ಮತ್ತು ಆಪರೇಷನ್ ಸಿಂಧೂರ್ ಸಮಯದಲ್ಲಿ ಬಹಾವಲ್ಪುರ್ ಮತ್ತು ಮುರಿಡ್ಕೆ ಭಯೋತ್ಪಾದಕ ಶಿಬಿರಗಳಲ್ಲಿ ಭಾರತೀಯ ಸೇನೆಯಿಂದ ಕೊಲ್ಲಲ್ಪಟ್ಟ ಭಯೋತ್ಪಾದಕರ ಹಲವಾರು ಛಾಯಾಚಿತ್ರಗಳನ್ನು ನಾವು ನೋಡಿದ್ದೇವೆ ಎಂದು ಹೇಳಿದರು.
ಭಾರತೀಯ ರಾಜತಾಂತ್ರಿಕರಾಗಿರುವ ಪೆಟಲ್ ಗಹ್ಲೋಟ್, ಶೆಹಬಾಜ್ ಷರೀಫ್ ಅವರ ಭಾಷಣವನ್ನು ಹಾಸ್ಯಾಸ್ಪದ ಗಿಮಿಕ್ ಎಂದು ಕರೆದು ಶೆಹಬಾಜ್ ಷರೀಫ್ ನಿಜವಾಗಿಯೂ ಶಾಂತಿಯನ್ನು ಬಯಸಿದರೆ, ಪಾಕಿಸ್ತಾನ ತಕ್ಷಣವೇ ಭಯೋತ್ಪಾದಕ ಶಿಬಿರಗಳನ್ನು ಮುಚ್ಚಿ ಎಲ್ಲಾ ಭಯೋತ್ಪಾದಕರನ್ನು ಭಾರತಕ್ಕೆ ಹಸ್ತಾಂತರಿಸಬೇಕು. ಈ ನಿಮ್ಮ ನಾಟಕಗಳಿಂದ ಸತ್ಯ ಬದಲಾಗೋದಿಲ್ಲ. ದ್ವೇಷ, ಧರ್ಮಾಂಧತೆ ಮತ್ತು ಅಸಹಿಷ್ಣುತೆಯನ್ನು ಪಾಲಿಸುವ ದೇಶವು ಈ ಸಭೆಗೆ ನಂಬಿಕೆಯ ವಿಷಯಗಳ ಬಗ್ಗೆ ಉಪದೇಶ ನೀಡುತ್ತಿರುವುದು ವಿಪರ್ಯಾಸ ಎಂದು ಹೇಳಿದರು.
ಭಾರತದೊಂದಿಗಿನ ಇತ್ತೀಚಿನ ಕದನ ವಿರಾಮದ ಬಗ್ಗೆ ಪಾಕಿಸ್ತಾನದ ಪ್ರಧಾನಿ ವಿಚಿತ್ರ ಮಾಹಿತಿಯನ್ನು ನೀಡಿದ್ದಾರೆ. ಈ ವಿಷಯದ ಬಗ್ಗೆ ದಾಖಲೆಗಳು ಸ್ಪಷ್ಟವಾಗಿವೆ. ಮೇ 9 ರವರೆಗೆ, ಪಾಕಿಸ್ತಾನವು ಭಾರತದ ಮೇಲೆ ಹೆಚ್ಚಿನ ದಾಳಿಗಳ ಬೆದರಿಕೆ ಹಾಕುತ್ತಿತ್ತು.






















































