
ಬೆಂಗಳೂರು: ಇಂದು ಬಿಜೆಪಿ ನಾಯಕರು ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ರಸ್ತೆಗಿಳಿದು ನಗರದ ಬಿಜೆಪಿ ಕಚೇರಿಯಿಂದ ವಿಧಾನಸೌಧದ ವರೆಗೆ ನಾಯಕರು ಸೈಕಲ್ ಜಾಥಾ ನಡೆಸಲು ನಿರ್ಧರಿಸಿದ್ದು ಆದರೆ ಇದಕ್ಕೆ ಅವಕಾಶ ಮಾಡಿಕೊಡದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು ಬಿಜೆಪಿ ಕಚೇರಿಯಿಂದ ವಿಧಾನಸೌಧದ ವರೆಗೆ ವಿಜಯೇಂದ್ರ ನೇತೃತ್ವದಲ್ಲಿ ಬೆಳಗ್ಗೆ 9:30 ಕ್ಕೆ ಸೈಕಲ್ ಜಾಥಾ ಆರಂಭಿಸಿದ್ದು ಆದರೆ ಬಿಜೆಪಿ ಕಚೇರಿ ಮುಂಭಾಗದಲ್ಲೇ ಪ್ರತಿಭಟನಾಕಾರರನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ.
ಬಿಜೆಪಿ ನಾಯಕರು ಪ್ರತಿಭಟನೆಗೆಂದು ಸಿಲ್ಕ್ ಬೋರ್ಡ್ ಬಳಿ ಇರುವ ‘ಸೈಕಲ್ ಟು ಗೋ’ ಸಂಸ್ಥೆಯಿಂದ 150 ಸೈಕಲ್‌ಗಳನ್ನು ಬಾಡಿಗೆಗೆ ತಂದಿದ್ದು ಆದರೆ ಪ್ರತಿಭಟನಾಕಾರರನ್ನು ಬಿಜೆಪಿ ಕಚೇರಿ ದಾಟದಂತೆ ಪೊಲೀಸರು ತಡೆದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಜ್ಯಾಧ್ಯಕ್ಷ ವಿಜಯೇಂದ್ರ, ಶಾಸಕರಾದ ಅಶ್ವಥ್ ನಾರಾಯಣ್, ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.